ಮೊಬೈಲ್ ದಾಖಲೆ ಆಧಾರದಲ್ಲಿ ಉಗ್ರರ ಪರ ಗೋಡೆ ಬರಹ ಬರೆದ ಶಂಕಿತ ಆರೋಪಿ ವಶಕ್ಕೆ

2:12 PM, Thursday, December 3rd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Terorist ಮಂಗಳೂರು : ಮೊಬೈಲ್ ದಾಖಲೆ ಆಧಾರದಲ್ಲಿ ಮಂಗಳೂರು ನಗರದಲ್ಲಿ ಉಗ್ರರ ಪರ ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ತೀರ್ಥಹಳ್ಳಿಯ ನಝೀರ್ ಮುಹಮ್ಮದ್ (26)ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಕದ್ರಿ ಪೊಲೀಸರು ಆತನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈತ ನಗರದಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ. ಮೊಬೈಲ್ ದಾಖಲೆ ಆಧಾರದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ನ.27ರಂದು ಕದ್ರಿ‌ ಪೊಲೀಸ್ ಠಾಣೆ ಸಮೀಪದ ಬಿಜೈ ಬಳಿಯ ರಸ್ತೆಯ ಗೋಡೆಯೊಂದರಲ್ಲಿ “ನಮ್ಮನ್ನು ವಿದ್ವಂಸಕ ಕೃತ್ಯ ನಡೆಸಲು ಉತ್ತೇಜಿಸಲು ಬರಬೇಡಿ, ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್ ಗಳಿಗೆ ಸಂಘಿಗಳನ್ನು ಯಾವ ರೀತಿ ನೋಡಿಕೊಳ್ಳಬೇಕು ಎನ್ನುವುದು ತಿಳಿದಿದೆ.” ಅಲ್ಲದೆ ‘ಲಷ್ಕರ್ ಝಿಂದಾಬಾದ್’ ಎಂದು ಬರೆಯಲಾಗಿತ್ತು. ಬಳಿಕ ನ.29ರಂದು ನಗರದ ಪಿವಿಎಸ್ ಸಮೀಪದ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯ ಮೇಲೆ “Gustak e rasool ek hi saza tan say juda” ಎಂದು ಬರಹ ಪ್ರತ್ಯಕ್ಷವಾಗಿತ್ತು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English