ಕಂಟೈನರ್‌ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

2:45 PM, Sunday, December 6th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Manvithಮಂಗಳೂರು : ಬೈಕ್ ಸವಾರ ಕಂಟೈನರ್‌ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ  ಸ್ಥಳದಲ್ಲೇ ಓರ್ವ ಮೃತಪಟ್ಟ ಘಟನೆ ರವಿವಾರ ಮಧ್ಯಾಹ್ನ ನಗರದ ಪಡೀಲ್‌ನಲ್ಲಿ ನಡೆದಿದೆ.

ನೀರುಮಾರ್ಗದ ಮನ್ವಿತ್(22) ಮೃತ ಬೈಕ್‌ ಸವಾರ ಎಂದು ತಿಳಿದುಬಂದಿದೆ.

ಕಂಟೈನರ್ ನಂತೂರು ಕಡೆಯಿಂದ ಪಡೀಲ್‌ನತ್ತ ಸಂಚರಿಸುತ್ತಿತ್ತು. ಈ ವೇಳೆ ಎದುರುಗಡೆಯಿಂದ ಬಂದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಕಂಟೈನರ್ ಅಡಿಗೆ ಬಿದ್ದಿದೆ ಎನ್ನಲಾಗಿದೆ. ಕಂಟೈನರ್ ಬೈಕ್ ಮೇಲೆ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.  ಬೈಕ್ ಜಖಂಗೊಂಡಿದ್ದು, ಸವಾರನ ಹೆಲ್ಮೆಟ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಈ ಕುರಿತು ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English