ಡಿಸೆಂಬರ್ 15 ರಂದು ಕೈತ್ರೋಡಿ ಕ್ಷೇತ್ರದ ಚಂಡಿಕಾಯಾಗಕ್ಕೆ ಮಹರ್ಷಿವಾಣಿ ಖ್ಯಾತಿಯ ಡಾ. ಆನಂದ ಗುರೂಜಿ

6:43 PM, Wednesday, December 9th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Kaitrodyಬಂಟ್ವಾಳ :  ಕೈತ್ರೋಡಿ ಕ್ವಾರ್ಟಸ್ ಶ್ರೀ ಮಂತ್ರ ದೇವತೆ ಕೊರಗಜ್ಜ ಕ್ಷೇತ್ರದಲ್ಲಿ ಡಿಸೆಂಬರ್ 15 ರಂದು ಬೆಳಗ್ಗೆ ಗಂಟೆ 7.30ರಿಂದ ವೇದಮೂರ್ತಿ ಸುಬ್ರಹ್ಮಣ್ಯ ಪರಾಡ್ಕರ್ ಗುಂಡ್ಯಡ್ಕ ಮತ್ತು ರಾಧಾಕೃಷ್ಣ ಭಟ್ ಪೆದಮಲೆ ಮಾರ್ಗದರ್ಶನದಲ್ಲಿ ಚಂಡಿಕಾಯಾಗ ಆರಂಭಗೊಳ್ಳಲಿದ್ದು ಅಂದು ಮಧ್ಯಾಹ್ನ ಝೀ ಕನ್ನಡ ಮಹರ್ಷಿವಾಣಿ ಖ್ಯಾತಿಯ ಡಾ. ಆನಂದ ಗುರೂಜಿ ಮತ್ತು ಕಟೀಲು ಕ್ಷೇತ್ರದ ವೇದಮೂರ್ತಿ ಕಮಲಾದೇವಿ ಅಸ್ರಣ್ಣರ ಉಪಸ್ಥಿತಿಯಲ್ಲಿ ಪೂರ್ಣಾಹುತಿಗೊಳ್ಳಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ಲೋಕೇಶ್ ಹೇಳಿದ್ದಾರೆ.

ಡಿಸೆಂಬರ್ 15 ರಿಂದ 19ರ ವರೆಗೆ ಚಂಡಿಕಾಯಾಗ ಸಹಿತ ಯಕ್ಷಗಾನ ಮತ್ತು ವಾರ್ಷಿಕ ನೇಮೋತ್ಸವ ಮತ್ತಿತರ ಕಾರ್ಯಕ್ರಮ ನಡೆಯಲಿದೆ.

ಡಿಸೆಂಬರ್ 15 ರಂದು ರಾತ್ರಿ ಗಂಟೆ 7.30ರಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಿತ್ರನಟ ಅರ್ಜುನ್ ಕಾಪಿಕಾಡ್ ಮತ್ತು ದೇವದಾಸ ಕಾಪಿಕಾಡ್ ಭಾಗವಹಿಸುವರು. ರಾತ್ರಿ ಗಂಟೆ 9ರಿಂದ ‘ಪನಿಯರೆ ಆವಂದಿನ’ ತುಳು ನಾಟಕ ಪ್ರದರ್ಶನಗೊಳ್ಳಲಿದೆ. ಇದೇ ವೇಳೆ ಕೊರಗಜ್ಜ ಭಕ್ತಿಗೀತೆ ಹಾಡಿ ಗಮನ ಸೆಳೆದ ಬಾಲ ಪ್ರತಿಭೆ ಕಾರ್ತಿಕ್ ಕಾರ್ಕಳ ಅವರನ್ನು ಸನ್ಮಾನಿಸಿ ಆಶೀರ್ವಚನ ನೀಡುವರು. ಎಂದು ತಿಳಿಸಿದರು.

ಡಿ.17ರಂದು ರಾತ್ರಿ ಗಂಟೆ 9ಕ್ಕೆ ಕಟೀಲು ಮೇಳದವರಿಂದ 3ನೇ ವರ್ಷದ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ನಡೆಯಲಿದೆ.

ಡಿ. 19ರಂದು ರಾತ್ರಿ ಗಂಟೆ 8 ರಿಂದ ಮಂತ್ರದೇವತೆ ಮತ್ತು ಕೊರಗಜ್ಜ ದೈವಗಳಿಗೆ ವಾರ್ಷಿಕ ನೇಮೋತ್ಸವ ನಡೆಯಲಿದ್ದು, ಪ್ರತಿದಿನ ಮಧ್ಯಾಹ್ನ ಮತ್ತು ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ ಇದೆ ಎಂದು ಅವರು ವಿವರಿಸಿದರು.

ಕಳೆದ 24 ವರ್ಷಗಳಿಂದ ಇಲ್ಲಿ ಕೊರಗಜ್ಜ ದೈವ ಆರಾಧಿಸಿಕೊಂಡು ಬರುತ್ತಿದ್ದು ಕಳೆದ ಐದು ವರ್ಷಗಳಿಂದ ವಿವಿಧ ಜಿಲ್ಲೆಯ ಭಕ್ತರು ಆಗಮಿಸಿ ಅವರ ಕಷ್ಟ ಕಾರ್ಪಣ್ಯಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಕೋವಿಡ್ ಸಂಕಷ್ಟ ಸಮಯದಲ್ಲಿ ನೂರಾರು ಕುಟುಂಬಗಳಿಗೆ ಉಚಿತ ಅಕ್ಕಿ ಮತ್ತಿತರ ಸಾಮಾಗ್ರಿ ವಿತರಿಸಲಾಗಿದ್ದು ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯೂ ನಡೆಯುತ್ತಿದೆ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಜಿ ವಲಯಾಧ್ಯಕ್ಷ ಚಂದಪ್ಪ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Kaitrody

Kaitrodi

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English