- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಗ್ರಾಪಂ ಚುನಾವಣೆ : ಬುಧವಾರ ದ.ಕ. ಜಿಲ್ಲೆಯಲ್ಲಿ 513 ನಾಮಪತ್ರಗಳು ಸಲ್ಲಿಕೆ

Rajendra [1]ಮಂಗಳೂರು : ಮೊದಲ ಸುತ್ತಿನ ಗ್ರಾಪಂ ಚುನಾವಣೆಗೆ ಮೂರನೇ ದಿನವಾದ ಬುಧವಾರ ದ.ಕ. ಜಿಲ್ಲೆಯಲ್ಲಿ 513 ನಾಮಪತ್ರಗಳು ಸಲ್ಲಿಕೆಯಾಗಿವೆ.

ಮಂಗಳೂರು ತಾಲೂಕಿನಲ್ಲಿ 141, ಮೂಡುಬಿದಿರೆಯಲ್ಲಿ 52 ಮತ್ತು ಬಂಟ್ವಾಳ ತಾಲೂಕಿನಲ್ಲಿ 320 ನಾಮಪತ್ರಗಳು ಸಲ್ಲಿಕೆಯಾಗಿವೆ.
ಮೊದಲ ದಿನವಾದ ಸೋಮವಾರ 30, ಎರಡನೇ ದಿನವಾದ ಮಂಗಳವಾರ 38 ನಾಮಪತ್ರ ಸಲ್ಲಿಕೆಯಾಗಿದ್ದವು. ಒಟ್ಟಾರೆ ಮೂರು ದಿನಗಳಲ್ಲಿ 581 ನಾಮಪತ್ರಗಳು ಸಲ್ಲಿಕೆಯಾದಂತಾಗಿವೆ.

ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿದೆ. ಮರುದಿನ (ಶನಿವಾರ) ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 3,222 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 1,681 ಸ್ಥಾನಗಳಿಗೆ ಮತ್ತು ದ್ವಿತೀಯ ಹಂತದಲ್ಲಿ 1,541 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.