ಪಡುಪಣಂಬೂರು : ಮಗು ಸಹಿತ ಒಂದೇ ಕುಟುಂಬದ ಮೂವರ ಮೃತದೇಹ ಪತ್ತೆ

11:24 PM, Monday, December 14th, 2020
Share
1 Star2 Stars3 Stars4 Stars5 Stars
(No Ratings Yet)
Loading...

vinod Saliyanಮುಲ್ಕಿ : ಒಂದೇ ಕುಟುಂಬದ ಮೂವರ ಮೃತದೇಹಗಳು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಕಲ್ಲಾಪು ಬಳಿ ಸೋಮವಾರ ಮನೆಯೊಳಗೆ ಪತ್ತೆಯಾಗಿದೆ.

ವಿನೋದ್ ಸಾಲ್ಯಾನ್ (38), ಪತ್ನಿ ರಚನಾ (38), ಪುತ್ರ ಸಾಧ್ಯ (10) ಮೃತಪಟ್ಟವರು. ವಿನೋದ್ ಅವರು ಪತ್ನಿ ಹಾಗೂ ಮಗನಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಕೃತ್ಯ ಬೆಳಕಿಗೆ ಬಂದಿದ್ದು ಶನಿವಾರ ರಾತ್ರಿ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.

ಪಡುಪಣಂಬೂರು ಪರಿಸರದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ವಿನೋದ್ ಸಾಲ್ಯಾನ್ ಮುಂಬೈಯಲ್ಲಿ ಟಾಟಾ ಹೌಸಿಂಗ್ ನಲ್ಲಿ ಕೆಲಸಕ್ಕಿದ್ದು ವರ್ಷದ ಹಿಂದೆ ಊರಿಗೆ ಆಗಮಿಸಿ ಹಳೆಯಂಗಡಿ ಸಮೀಪದ ಪಡುಪಣಂಬೂರಿನ ಬೆಳ್ಳಾಯರು ಕಲ್ಲಾಪು ಬಳಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದರು.

ಎರಡು ದಿನಗಳಿಂದ ವಿನೋದ್ ಸಾಲ್ಯಾನ್ ಹಾಗೂ ಪತ್ನಿ, ಮಗ ಮನೆಯಿಂದ ಹೊರಗೆ ಬರದೇ ಇದ್ದುದನ್ನು ಕಂಡು ಸಂಶಯಗೊಂಡು ಸ್ಥಳೀಯರು ಮನೆಯ ಕಿಟಕಿ ಒಡೆದು ನೋಡಿದಾಗ ಮೃತದೇಹ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಮೃತ ವಿನೋದ್ ಸಾಲ್ಯಾನ್ ಕುತ್ತಿಗೆಯಲ್ಲಿ ಬಟ್ಟೆ ಸಹಿತ ಮೊಬೈಲ್ ಚಾರ್ಜರ್‌ನ ವಯರ್ ಕಂಡುಬಂದಿದೆ. ಪತ್ನಿ ಹಾಗೂ ಪುತ್ರನಿಗೆ ವಿಷ ನೀಡಿ ತಾನು ಕೂಡಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಎಸಿಪಿ ಬೆಳ್ಳಿಯಪ್ಪ, ಮುಲ್ಕಿ ಸರ್ಕಲ್ ಇನ್‌ಸ್ಪೆಕ್ಟರ್ ಕುಸುಮೋಧರ್, ಎಸ್ಸೈ ವಿನಾಯಕ ತೋರಗಲ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Dharmasthala-Deepothsava  

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English