ಎ.ಐ.ಸಿ.ಸಿ.ಕಾರ್ಯದರ್ಶಿಯಾಗಿ ಮಾಜಿ ಶಾಸಕರಾದ ಶ್ರೀ ಐವನ್ ಡಿ ಸೋಜ ನೇಮಕ

10:40 PM, Saturday, December 19th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

IvanDSouza ಮಂಗಳೂರು  : ಎ.ಐ.ಸಿ.ಸಿ.ಕಾರ್ಯದರ್ಶಿಯಾಗಿ ಮಾಜಿ ಶಾಸಕರಾದ ಶ್ರೀ ಐವನ್ ಡಿ ಸೋಜರವರು ನೇಮಕ-ಕೇರಳ ರಾಜ್ಯದ ಹೊಣೆಗಾರಿಕೆ; ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ, ಇವರು ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ, ವಿಧಾನ ಪರಿಷತ್ ಮಾಜಿ ಶಾಸಕರಾದ ಶ್ರೀ ಐವನ್ ಡಿ ಸೋಜರವರನ್ನು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿಯಾಗಿ ಕೂಡಲೇ ಜಾರಿಗೆ ತರುವಂತೆ ನೇಮಕ ಮಾಡಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಆಡಳಿತ) ಶ್ರೀ ಕೆ.ಸಿ.ವೇಣುಗೋಪಾಲ್ ಇವರು ಆದೇಶವನ್ನು ಹೊರಡಿಸಿದ್ದಾರೆ.

ಶ್ರೀ ಐವನ್ ಡಿ ಸೋಜ, ಇವರು 1986 ರಲ್ಲಿ ಮಂಡಲ ಪಂಚಾಯತ್ ಸದಸ್ಯರಾಗುವ ಮೂಲಕ ಚುನಾಯಿತರಾಗಿ ರಾಜಕೀಯ ಪ್ರವೇಶಿಸಿ, ವಿವಿಧ ಹಂತಗಳಲ್ಲಿ ಕಾರ್ಯ ನಿರ್ವಹಿಸಿ, ಸರ್ವ ಕಾಲೇಜು ವಿದ್ಯಾರ್ಥಿ ನಾಯಕರಾಗಿ, ಎಸ್.ಡಿ.ಎಂ. ಕಾನೂನು ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ನಾಯಕರಾಗಿ, ಮಂಗಳೂರು ವಿಶ್ವ ವಿದ್ಯಾನಿಲಯದ ಸೆನೆಟ್ ಸಿಂಡಿಕೇಟ್ ಆಕಾಡೆಮಿಕ್ ಕೌನ್ಸಿಲಿನ ಸದಸ್ಯರಾಗಿ, ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ, ಬಸ್ಸು, ಆಟೋರಿಕ್ಷಾ, ತಲೆಹೊರೆ ಕಾರ್‍ಮಿಕ ಸಂಘಟನೆಗಳ ಅಧ್ಯಕ್ಷರಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ, ಕೆಪಿಸಿಸಿಯ ವಕ್ತಾರರಾಗಿ ಸೇವೆ ಸಲ್ಲಿಸಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ, ಕಂದಾಯ ಇಲಾಖೆಯ ಜವಬ್ದಾರಿಯನ್ನು ವಹಿಸಿ, ವಿಧಾನ ಪರಿಷತಿನಲ್ಲಿ ಶೇಕಡ ೧೦೦ ಹಾಜರಾತಿ ಪಡೆದ ಇವರು, ಸದನವೀರ ಪ್ರಶಸ್ತಿಗೆ ಪಾತ್ರರಾಗಿ, ರಾಜ್ಯದ 30 ಜಿಲ್ಲೆಗಳಿಗೂ ಪ್ರವಾಸ ಮಾಡಿ, ಸರಕಾರ ಮತ್ತು ಪಕ್ಷವನ್ನು ಸಂಘಟಿಸಿದ ಸಮರ್ಥ ನಾಯಕ ಎಂದು ಗುರುತಿಸಿಗೊಂಡಿದ್ದು, ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿಯಾಗಿ ನೇಮಕಗೊಂಡು, ಕೇರಳ ರಾಜ್ಯದ ಉಸ್ತುವಾರಿಯನ್ನು ವಹಿಸಿರುತ್ತಾರೆ.

1994 ಮತ್ತು 1999 ರಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದಿಂದ ಹಾಗೂ 2008 ರಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದಿಂದ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಈ ಹಿಂದೆ ಕೇರಳ ರಾಜ್ಯದ ಇಡ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳ ಚುನಾವಣಾ ವೀಕ್ಷಕರಾಗಿ ಕಾರ್ಯ ನಿರ್ವಹಿಸಿದ್ದರು. ಈ ಹಿಂದೆ ಜಿಲ್ಲೆಯ ಮಾಜಿ ಸಂಸದ ಶ್ರೀ ವಿನಯಕುಮಾರ್ ಸೊರಕೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ಶ್ರೀ ಆಸ್ಕರ್ ಫೆರ್ನಾಂಡಿಸ್, ಶ್ರೀ ಜನಾರ್ಧನ ಪೂಜಾರಿ, ಶ್ರೀ ವೀರಪ್ಪ ಮೊಲಿ ಇವರುಗಳು ಎ.ಐ.ಸಿ.ಸಿ ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿರುತ್ತಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English