ಮಂಗಳೂರು :ಮಂಗಳೂರು ಪತ್ರಿಕಾ ಭವನದಲ್ಲಿ ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮಂಗಳೂರು ಪ್ರೆಸ್‌ಕ್ಲಬ್ ಇವುಗಳ ಜಂಟಿ ಆಶ್ರಯದಲ್ಲಿ ಕೊಡಿಯಾಲ್‌ಬೈಲ್ ನ ಯೆನೆಪೋಯ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದೊಂದಿಗೆ ಪತ್ರಕರ್ತರಿಗಾಗಿ ಹೃದಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.
ಶಿಬಿರವನ್ನು ಉದ್ಘಾಟಿಸಿದ ಯೆನೆಪೋಯ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಹರೀಶ್ ನಾಯರ್ ಇಂದಿನ ಒತ್ತಡದ ಪರಿಸ್ಥಿತಿಯಲ್ಲಿ ಆರೋಗ್ಯದೆಡೆಗೆ ಕಾಳಜಿ ವಹಿಸುವುದು ಅವಶ್ಯಕ. ಈ ದಿಸೆಯಲ್ಲಿ ಯೆನೆಪೋಯ ಆಸ್ಪತ್ರೆಯು ಉಚಿತವಾಗಿ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಆರೋಗ್ಯ ಸೇವೆಯನ್ನು ನೀಡುತ್ತಿದೆ. ಪತ್ರಕರ್ತರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದರು. ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ ಪರೀಕ್ಷೆ ನಡೆಸಿ ಆರೋಗ್ಯ ಸಲಹೆಯನ್ನು ನೀಡಲಾಯಿತು.
ಹೃದಯ ರೋಗ ತಜ್ಞ ಡಾ. ರಾಹುಲ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಉಮೇಶ್ ಗೌಡ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ರಾಮಕೃಷ್ಣ ಆರ್ ಮತ್ತಿತರರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English