ಕರ್ನಾಟಕ ಯಕ್ಷಗಾನ ಅಕಾಡಮಿಯ 2020ನೇ ಸಾಲಿನ ಗೌರವ ಪ್ರಶಸ್ತಿ ಘೋಷಣೆ

1:51 PM, Tuesday, December 22nd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

timmappa Gujaranಮಂಗಳೂರು : ಕರ್ನಾಟಕ ಯಕ್ಷಗಾನ ಅಕಾಡಮಿಯ 2020ನೆ ಸಾಲಿನ ಗೌರವ ಪ್ರಶಸ್ತಿ  ಪ್ರಶಸ್ತಿ ಘೋಷಣೆಯಾಗಿದ್ದು, ಪ್ರದಾನ ಕಾರ್ಯಕ್ರಮವು 2021ರ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ.

ಅಕಾಡಮಿಯ ಅಧ್ಯಕ್ಷ ಎಂ.ಎ.ಹೆಗಡೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆಗೊಳಿಸಿದರು.

ಗೌರವ ಪ್ರಶಸ್ತಿಗೆ ಕೆ.ತಿಮ್ಮಪ್ಪಗುಜರನ್, ಬಿ.ಸಂಜೀವ ಸುವರ್ಣ,  ಡಾ. ವಿಜಯ ನಳಿನಿ ರಮೇಶ್, ಡಾ. ಚಕ್ಕೆರೆ ಶಿವಶಂಕರ್, ಬಿ.ಪರಶುರಾಮ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ 50,000 ರೂ.ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರವನ್ನು ಒಳಗೊಂಡಿದೆ.

‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃರಾದ ಡಿ.ಎಸ್.ಶ್ರೀಧರ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು 1 ಲಕ್ಷ ರೂ.ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರವನ್ನು ಒಳಗೊಂಡಿದೆ.

‘ಯಕ್ಷಸಿರಿ ವಾರ್ಷಿಕ ಪ್ರಶಸ್ತಿ’ಗೆ ಗೋಪಾಲ ಆಚಾರ್ಯ ತೀರ್ಥಹಳ್ಳಿ, ಬೇಲ್ತೂರು ರಮೇಶ್, ಆವರ್ಸೆ ಶ್ರೀನಿವಾಸ ಮಡಿವಾಳ, ಹರಿನಾರಾಯಣ ಬೈಪಾಡಿತ್ತಾಯ, ಸಂಜಯ್ ಕುಮಾರ್ ಶೆಟ್ಟಿ, ಎಂ.ಆರ್.ಹೆಗಡೆ ಕಾನಗೋಡ, ಸುಬ್ರಹ್ಮಣ್ಯ ಧಾರೇಶ್ವರ, ವಿಟ್ಲ ಶಂಭು ಶರ್ಮ, ಹನುಮಂತರಾ ಯಪ್ಪ, ಎ.ಎಂ.ಮುಳವಾಗಲಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ 25,000 ರೂ. ನಗದು, ಪ್ರಮಾಣ ಪತ್ರವನ್ನು ಒಳಗೊಂಡಿದೆ.

ಸುದ್ದಿಗೋಷ್ಠಿಯಲ್ಲಿ ರಿಜಿಸ್ಟ್ರಾರ್ ಎಸ್.ಹೆಚ್.ಶಿವರುದ್ರಪ್ಪ, ಸದಸ್ಯರಾದ ರಾಧಾಕೃಷ್ಣ ಕಲ್ಚಾರ್, ಕದ್ರಿ ನವನೀತ ಶೆಟ್ಟಿ, ದಾಮೋದರ ಶೆಟ್ಟಿ ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English