ದೇಶದ 9 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ಸುಮಾರು 18,000 ಕೋಟಿ ರೂ.ಗಳು ವರ್ಗಾವಣೆ

6:36 PM, Friday, December 25th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Vajapayee Birthday ಮಂಗಳೂರು :  ರಾಜಕೀಯವನ್ನು ಪ್ರಾಮಾಣಿಕತೆ, ಶ್ರದ್ಧೆ ಹಾಗೂ ರಾಷ್ಟ್ರಭಕ್ತಿಯ ಚೌಕಟ್ಟಿನಲ್ಲಿ ನಿಲ್ಲಿಸಿದವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ. ಇದೀಗ ಅವರ ಚಿಂತನಾ ಹಾದಿಯಲ್ಲಿ ಪ್ರಧಾನಿ ಮೋದಿಯವರು ಕಿಸಾನ್ ಸಮ್ಮಾನ್‌ನಂತಹ ಹಲವಾರು ಯೋಜನೆ, ಕಾಯ್ದೆಗಳ ಮೂಲಕ ರೈತರಿಗೂ ಸ್ವಾಭಿಮಾನದ ಬದುಕನ್ನು ಕಲ್ಪಿಸುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗದರ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ದ.ಕ. ಜಿಲ್ಲಾ ಬಿಜೆಪಿ ಘಟಕ ಹಾಗೂ ರೈತ ಮೋರ್ಛಾದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಹಾಗೂ ಕಿಸಾನ್ ಸಮ್ಮಾನ್ ದಿನಾಚರಣೆ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರು ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ ಸುಮಾರು 9 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ಸುಮಾರು 18,000 ಕೋಟಿ ರೂ.ಗಳನ್ನು ವರ್ಗಾಯಿಸುವ ಕಾರ್ಯಕ್ರಮ ಹಾಗೂ ದೇಶವನ್ನದ್ದೇಶಿಸಿ ನೀಡಿದ ಸಂದೇಶದ ನೇರ ಪ್ರಸಾರವನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ವೀಕ್ಷಿಸಲು ಬೃಹತ್ ಪರದೆಯ ವ್ಯವಸ್ಥೆ ಸ್ಥಳದಲ್ಲಿ  ಮಾಡಲಾಗಿತ್ತು.

Vajapeyee Birthdayಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಹಿಸಿದ್ದರು.

ಅಜಾತಶತ್ರುವಾಗಿ ಎಲ್ಲ ಪಕ್ಷಗಳ ನಾಯಕರನ್ನು ಸೆಳೆದ ದೇಶದ ಬಗ್ಗೆಯೇ ಆಲೋಚನೆ ಮಾಡುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ರಾಷ್ಟ್ರ ಚಿಂತಿತ ನಾಯಕ ಎಂದು ಸಂಸದ ನಳಿನ್ ಕುಮಾರ್ ಕಟೀಲು  ಹೇಳಿದರು.

ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಕುಳಿತವರು ಮಾತ್ರವಲ್ಲದೆ, ಸಮಾರಂಭದಲ್ಲಿ ಭಾಗವಹಿಸಿದ್ದವರಿಗೆಲ್ಲಾ ಹಸಿರು ಶಾಲು ನೀಡಲಾಗಿತ್ತು. ಎಲ್ಲರೂ ಹಸಿರು ಶಾಲು ಹೆಗಲಿಗೆ ಹಾಕಿಕೊಂಡಿರುವಂತೆಯೇ ಸಭೆಯು ರೈತ ಗೀತೆಯೊಂದಿಗೆ ಆರಂಭಗೊಂಡಿತು.

ವೇದಿಕೆಯಲ್ಲಿ ಶಾಸಕರಾದ ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಸಂಜೀವ ಮಠಂದೂರು, ಉಮಾನಾಥ ಕೋಟ್ಯಾನ್, ಪ್ರತಾಪ್ ಸಿಂಹ ನಾಯಕ್, ಮೇಯರ್ ದಿವಾಕರ ಪಾಂಡೇಶ್ವರ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ಉದಯ ಕುಮಾರ್ ಶೆಟ್ಟಿ, ರೈತ ಮುಖಂಡ ಕಡಮಜಲು ಸುಭಾಷ್ ರೈ  ಮೊದಲಾದವರು ಉಪಸ್ಥಿತರಿದ್ದರು.

ಎಪಿಎಂಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ ಸ್ವಾಗತಿಸಿದರು. ವಸಂತ ಕುಮಾರ್ ವಂದಿಸಿದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English