ಯಕ್ಷಗಾನಕ್ಕೆ ಜಾಗತಿಕ ಮನ್ನಣೆ ಅಗತ್ಯವಿದೆ: ಡಾ.ಜೋಷಿ

11:38 PM, Friday, December 25th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Nirpaje Bhim Bhat ಬಂಟ್ವಾಳ:  ಕಾರ್ಪೊರೆಟ್ ಮತ್ತು ಎಲೆಕ್ಟ್ರಾನಿಕ್ ಯುಗದಲ್ಲಿ ಯಕ್ಷಗಾನ ಕಲೆಗೆ ಹಿರಿಯ ಕವಿ ಡಾ.ಶಿವರಾಮ ಕಾರಂತರ ಕನಸಿನಂತೆ ‘ಜಾಗತಿಕ ಮನ್ನಣೆ’ ಸಿಗಲು ಪ್ರಯತ್ನ ಮುಂದುವರಿಬೇಕು ಎಂದು ಹಿರಿಯ ವಿದ್ವಾಂಸ, ಅರ್ಥಧಾರಿ, ಸಂಶೋಧಕ ಡಾ. ಎಂ.ಪ್ರಭಾಕರ ಜೋಶಿ ಹೇಳಿದ್ದಾರೆ.

ಇಲ್ಲಿನ ಬಿ.ಸಿ.ರೋಡು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮತ್ತು ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ವತಿಯಿಂದ ಶುಕ್ರವಾರ ಸಂಜೆ ‘ಕನ್ನಡ ಕಲ್ಲಣ ನೀರ್ಪಾಜೆ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು. ರಾಜ್ಯದಲ್ಲಿ ಕನ್ನಡ ಶಾಲೆ ಉಳಿಯದೆ ಯಕ್ಷಗಾನಕ್ಕೆ ಕೂಡಾ ಉಳಿಗಾಲ ಇಲ್ಲ ಎಂದು ಎಚ್ಚರಿಸಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಜಿಲ್ಲೆಯ ಕನ್ನಡೇತರರ ಕೊಡುಗೆ ಅಪಾರ ಎಂದರು.
ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ಮಾತನಾಡಿದರು. ಹಿರಿಯ ಅರ್ಥಧಾರಿ ಜಬ್ಬಾರ್ ಸಮೊ ಸಂಪಾಜೆ ಮತ್ತು ಹಿರಿಯ ಅರ್ಥಧಾರಿ ಉಜಿರೆ ಅಶೋಕ್ ಭಟ್ ಅಭಿನಂದನಾ ಭಾಷಣ ಮಾಡಿದರು. ಹಿರಿಯ ಕವಿ ಸುಬ್ರಾಯ ಭಟ್ ನೆಕ್ಕರೆಕಳೆಯ ನೀರ್ಪಾಜೆ ಸಂಸ್ಮರಣೆ ಮಾಡಿದರು. ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಅಧ್ಯಕ್ಷ ಪ್ರೊ.ಅಜಕ್ಕಳ ಗಿರೀಶ ಭಟ್ ಶುಭ ಹಾರೈಸಿದರು.
ಇದೇ ವೇಳೆ ಎಂ.ಗೋಪಾಲಕೃಷ್ಣ ಭಟ್ಟರ ಕೃತಿ ಮತ್ತು ರೇಷ್ಮಾ ಭಟ್ ಇವರ ಕಥಾಸಂಕಲನ ಬಿಡುಗಡೆಗೊಂಡಿತು. ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ನೀರ್ಪಾಜೆ ಭೀಮ ಭಟ್ಟರ ಪತ್ನಿ ಶಂಕರಿ ಬಿ.ಭಟ್, ಸುಜೇತಾ ಪಿ.ಜೋಷಿ, ಕಾವೇರಿ ಜಿ.ಭಟ್, ಮುಳಿಯ ರಾಘವಯ್ಯ, ಸುಭಾಷಿಣಿ ಮತ್ತಿತರರು ಇದ್ದರು.

ನೀರ್ಪಾಜೆ ಅಭಿಮಾನಿ ಬಳಗ ಅಧ್ಯಕ್ಷ ಸುದರ್ಶನ ಜೈನ್ ಸ್ವಾಗತಿಸಿದರು. ಬಂಟ್ವಾಳ ಕಸಾಪ ಅಧ್ಯಕ್ಷ ಕೆ.ಮೋಹನ ರಾವ್ ಪ್ರಾಸ್ತಾವಿಕ ಮಾತನಾಡಿದರು. ಜಗದೀಶ ಹೊಳ್ಳ ಮೊಡಂಕಾಪು ಪ್ರಾರ್ಥಿಸಿದರು. ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ ವಂದಿಸಿದರು. ಡಾ.ನಾಗವೇಣಿ ಮಂಚಿ ಮತ್ತು ರಮಾನಂದ ನೂಜಿಪ್ಪಾಡಿ, ವಿ.ಸು.ಭಟ್ ಕಾರ್ಯಕ್ರಮ ನಿರೂಪಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English