ಮಂಗಳೂರು :ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಸೇರಿದಂತೆ 500ಕ್ಕೂ ಅಧಿಕ ಅಶಕ್ತರಿಗೆ ಒಂದು ಕೋಟಿ ರೂ ಅಧಿಕ ಆರ್ಥಿಕ ಸಹಾಯಧನ ವಿತರಣಾ ಕಾರ್ಯಕ್ರಮ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಮೈದಾನ ದಲ್ಲಿಂದು ನಡೆಯಿತು.
ಎಂ.ಆರ್.ಜಿ ಗ್ರೂಪ್ ಸಂಸ್ಥಾಪಕ ಕೆ.ಪ್ರಕಾಶ್ ಶೆಟ್ಟಿ ಯವರ ಜನ್ಮದಿನದ ಅಂಗವಾಗಿ ಕಳೆದ ವರ್ಷ ಹಮ್ಮಿಕೊಂಡ ಪ್ರಕಾಶಾಭಿನಂದನಾ ಕಾರ್ಯಕ್ರಮದಲ್ಲಿ ಮಾತು ನೀಡಿದಂತೆ ಈ ವರ್ಷ ಅಶಕ್ತರಿಗೆ ಸಹಾಯಧನ ವಿತರಣೆ ಮಾಡಲಾಯಿತು.
ಬದುಕಿನಲ್ಲಿ ಎದುರಾಗುವ ಕಷ್ಟಗಳಿಗೆ ಹೆದರದೆ ಧೈರ್ಯವಾಗಿ ಎದುರಿಸಬೇಕಾಗಿದೆ. ನಾನು ಕಷ್ಟದ ಹಾದಿಯಲ್ಲಿಯೇ ಬೆಳೆದು ಬಂದವನು. ಕಷ್ಟದ ಅನುಭವ ನನಗಿದೆ. ಒಬ್ಬರು ಇನ್ನೊಬ್ಬರಿಗೆ ಪರಸ್ಪರ ಸಹಾಯ ಮಾಡುತ್ತಾ ಸಾಗಿದರೆ ಯಾವುದೇ ಕಷ್ಟವನ್ನು ಎದುರಿಸಬಹುದು ಎಂದು ಎಂ.ಆರ್.ಜಿ ಗ್ರೂಪ್ ಸಂಸ್ಥಾಪಕ ಪ್ರಕಾಶ್ ಶೆಟ್ಟಿ ಹೇಳಿದರು.
ಸಮಾರಂಭದಲ್ಲಿ ಶಾಸಕ ಭರತ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ , ಬಂಟರ ಯಾನೆ ನಾಡವರ ಮಾತ್ರ್ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಬಂಟ ಬಂಟ ಸಮಾಜದ ಗಣ್ಯರಾದ ಎ.ಜೆ.ಶೆಟ್ಟಿ, ಸದಾನಂದ ಶೆಟ್ಟಿ, ಜಯರಾಮ ಹೆಗ್ಡೆ, ಪುರು ಷೋತ್ತಮ ಶೆಟ್ಟಿ, ರತ್ನಾಕರ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ, ಸಂತೋಷ್ ಶೆಟ್ಟಿ, ಮನೋಹರ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಫಲಾನುಭವಿಗಳ ಪಟ್ಟಿಯನ್ನು ಡಾ.ಎಮ್. ಮೋಹನ ಆಳ್ವ ವಾಚಿಸಿದರು. ಗುರ್ಮೆ ಸುರೇಶ್ ಶೆಟ್ಟಿ ಸ್ವಾಗತಿಸಿದರು. ನಿತೀಶ್ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.
Click this button or press Ctrl+G to toggle between Kannada and English