ಶಿವಮೊಗ್ಗ: ವಿಧಾನಪರಿಷತ್ ಉಪಸಭಾಪತಿ ಧರ್ಮೇಗೌಡರ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದ್ದು, ಪಾರ್ಥಿವ ಶರೀರವನ್ನು ಸ್ವಗ್ರಾಮ ಸರಪನಹಳ್ಳಿಗೆ ತೆಗೆದುಕೊಂಡು ಹೋಗಲಾಯಿತು.
ಬೆಳಗ್ಗೆ ಸುಮಾರು 9 ಗಂಟೆಯಿಂದ ಪ್ರಾರಂಭವಾದ ಮರಣೋತ್ತರ ಪರೀಕ್ಷೆ ಮಧ್ಯಾಹ್ನ 1.20 ರ ಸುಮಾರಿಗೆ ಮುಗಿದಿದೆ. ನಂತರ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಿ ಡಿಸಿ ಕೆ.ಬಿ.ಶಿವಕುಮಾರ್ ಹೂಗುಚ್ಚವಿಟ್ಟು ಗೌರವ ವಂದನೆ ಸಲ್ಲಿಸಿದರು.
ಸಚಿವ ಬಸವರಾಜ್, ಸಂಸದ ಬಿ.ವೈ.ರಾಘವೇಂದ್ರ ಸಹ ಹೂಗುಚ್ಚವಿಟ್ಟು ಅಂತಿಮ ನಮನ ಸಲ್ಲಿಸಿದರು. ನಂತರ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರುಳಿಧರ್ ಸೇರಿದಂತೆ ಜೆಡಿಎಸ್ ಹಾಗೂ ಬಿಜೆಪಿಯ ಮುಖಂಡರು ಅಂತಿಮ ನಮನ ಸಲ್ಲಿಸಿದರು.
ಸಂಜೆಯಷ್ಟರಲ್ಲಿ ಅಂತಿಮ ವಿಧಿವಿಧಾನ ನಡೆಯಬೇಕಾದ ಕಾರಣ ವಿಶೇಷ ಆ್ಯಂಬ್ಯುಲೆನ್ಸ್ನಲ್ಲಿ ಮೃತದೇಹವನ್ನು ಸರಪನಹಳ್ಳಿಯ ತೋಟದ ಮನೆಗೆ ತೆಗೆದುಕೊಂಡು ಹೋಗಲಾಯಿತು.
ಆತ್ಮ ಹತ್ಯೆ
ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲ್ವೆ ಹಳಿ ಪಕ್ಕ ಪತ್ತೆಯಾಗಿದ್ದು, ಜೊತೆಗೆ ಡೆತ್ ನೋಟ್ ಸಹ ಸಿಕ್ಕಿತ್ತು.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಧರ್ಮೇಗೌಡರು ತಾಳ್ಮೆಯ ಸಭ್ಯ ವ್ಯಕ್ತಿಯಾಗಿದ್ದರು. ಅವರ ನಿಧನ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
Click this button or press Ctrl+G to toggle between Kannada and English