ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಐಪಿಎಸ್ ಅಧಿಕಾರಿ ಶಶಿಕುಮಾರ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಪೊಲೀಸ್ ರೀತಿಯಲ್ಲಿ ಕೆಲಸ ಮಾಡಿದರೆ ಅಪರಾಧ ರಹಿತ ಸಮಾಜ ನಿರ್ಮಾಣ ಸಾಧ್ಯ. ಪೊಲೀಸ್ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ. ಹಿಂದೆ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿದ್ದ ಪೋನ್ ಇನ್ ಕಾರ್ಯಕ್ರಮ ಮುಂದುವರಿಯುವ ಜೊತೆಗೆ ಪ್ರತಿ ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಅಹವಾಲು ಆಲಿಸುವ ಪೊಲ್ ವ್ಯವಸ್ಥೆ ರೂಪಿಸುವುದಾಗಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಪೊಲೀಸ್ ಮೇಲೆ ಹಲ್ಲೆ ಪ್ರಕರಣಗಳು ಕೇಳಿ ಬರುತ್ತಿವೆ. ಸಾರ್ವಜನಿಕರ ಸೇವೆ ಮಾಡುವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವಂತಹ ಕೃತ್ಯ ಸಹಿಸಲು ಅಸಾಧ್ಯ. ಇಂತಹ ಘಟನೆ ನಡೆದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
Click this button or press Ctrl+G to toggle between Kannada and English