ದಾರಿಯಲ್ಲಿ ಹೋಗಬೇಕಾದ ಪೊಲೀಸ್ ಜೀಪು ಅಂಗಡಿ ನುಗ್ಗಿ ಚೆಲ್ಲಾಪಿಲ್ಲಿ

11:15 PM, Thursday, January 7th, 2021
Share
1 Star2 Stars3 Stars4 Stars5 Stars
(No Ratings Yet)
Loading...

Police Jeepಬೆಳ್ತಂಗಡಿ:  ಮಡಿಕೇರಿಯತ್ತ ತೆರಳ ಬೇಕಾದ  ಪೊಲೀಸ್ ಜೀಪ್ವೊಂದು ಗುರುವಾರ  ಬೆಳಗ್ಗೆ ಅಂಗಡಿಗೆ ನುಗ್ಗಿದ ಘಟನೆ ನಾರಾವಿ ಸಮೀಪದ ಈದು ಕ್ರಾಸ್ ಬಳಿ ನಡೆದಿದೆ.

ಕಾರ್ಕಳದಿಂದ ಮಡಿಕೇರಿಯತ್ತ ಇನ್ಸ್ ಪೆಕ್ಷನ್ ಗಾಗಿ ತೆರಳುತ್ತಿದ್ದ ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದೆ. ಜೀಪ್ನಲ್ಲಿದ್ದ ಪೊಲೀಸರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಂಗಡಿ ಶೋಕೇಸ್ ಸೇರಿ ಇನ್ನಿತರ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ. ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ತಲೆಗೆ ಸ್ವಲ್ಪ ಗಾಯವಾಗಿದ್ದು, ಕಾರ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English