40 ಪಾರಿವಾಳಗಳನ್ನು ಕದ್ದ ಕಳ್ಳರು, 24 ಗಂಟೆಯಲ್ಲಿ ಆರೋಪಿಗಳ ಬಂಧನ

11:36 PM, Thursday, January 7th, 2021
Share
1 Star2 Stars3 Stars4 Stars5 Stars
(No Ratings Yet)
Loading...

pigeonಬಂಟ್ವಾಳ : ವಿಟ್ಲ ಸಮೀಪದ ಒಕ್ಕೆತ್ತೂರು ಮೂಲೆ ಎಂಬಲ್ಲಿ  ಸುಮಾರು 29 ಸಾವಿರ ರೂ. ಮೌಲ್ಯದ 40 ಪಾರಿವಾಳಗಳನ್ನು ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ವಿಟ್ಲ ಪೊಲೀಸರ ತಂಡ ಯಶಸ್ವಿಯಾಗಿದೆ.

ಪಾರಿವಾಳ ಸಾಕಿದ ಸುಲೈಮಾನ್  ಎಂಬವರು  ದೂರು ನೀಡಿ 24 ಗಂಟೆಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ದೇರಳಕಟ್ಟೆ ಪನೀರ್ ಮೂಲದ ಕುಂಪಳ ಚಿತ್ರಾಂಜಲಿ ನಗರ ನಿವಾಸಿ ಕರಡಿ ನಾಸಿರ್ (24), ಕಾವಲಕಟ್ಟೆ ಮೂಲದ ವಿಟ್ಲ ಸಮೀಪದ ಪಾತ್ರತೋಟ ನಿವಾಸಿ ರಿಝ್ವಾನ್ (19), ಬೋಳಂತೂರು ಮೂಲದ ಅಮ್ಟೂರು ನಿವಾಸಿ ಅಫೀಝ್ (18) ಬಂಧಿತ ಆರೋಪಿಗಳಾಗಿದ್ದಾರೆ.

ಜ.6ರ ತಡ ರಾತ್ರಿ 1 ಗಂಟೆ ಸುಮಾರಿಗೆ ಅಟೋ ರಿಕ್ಷಾದಲ್ಲಿ ಮೂವರು ಮನೆಯಂಗಳಕ್ಕೆ ಆಗಮಿಸಿ  ಸುಲೈಮಾನ್  ಅವರ  ಪಾರಿವಾಳದ ಗೂಡಿನ ಬೀಗ ಮುರಿದು ಕಳ್ಳತನ ಮಾಡಿ ರಿಕ್ಷಾದಲ್ಲಿ ಪಲಾಯನ ಮಾಡಿದ್ದರು. ಲೈಟ್ ಬೆಳಕಿನಲ್ಲಿ ಮುಖವನ್ನು ಗಮನಿಸಿದ್ದು, ಆರೋಪಿಗಳನ್ನು ಪತ್ತೆ ಹಚ್ಚಿಕೊಡಬೇಕಾಗಿ ಬುಧವಾರ ವಿಟ್ಲ ಠಾಣೆಗೆ ಸುಲೈ ದೂರು ನೀಡಿದ್ದರು.

ಒಕ್ಕೆತ್ತೂರು ಮೂಲೆ ಮನೆಯಲ್ಲಿ ಸುಲೈಮಾನ್ ಪಾರಿವಾಳ ಸಾಕುತ್ತಿರುವುದನ್ನು ಕಳ್ಳರು ಗಮನಿಸಿದ್ದರು.

ರಟ್ಟಿನ ಪೆಟ್ಟಿಗೆಯಲ್ಲಿ ಸುಮಾರು 22 ಪಾರಿವಾಳಗಳು ಲಭಿಸಿದ್ದು, ಕೃತ್ಯಕ್ಕೆ ಬಳಸಿದ ರಿಕ್ಷಾವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ರಿಝ್ವಾನ್ ಗೆಳೆಯ ಅಫೀಝ್ ಬೆಂಗಳೂರು ನಿಲಾದ್ರಿ ರಸ್ತೆಯ ಹೈಪರ್ ಮಾರ್ಕೆಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಮನೆಯಲ್ಲಿ ಕಾರ್ಯಕ್ರಮ ಇದ್ದ ಹಿನ್ನಲೆಯಲ್ಲಿ ಮನೆಗೆ ಆಗಮಿಸಿದ್ದ ಎನ್ನಲಾಗಿದೆ. ಕರಡಿ ನಾಸಿರ್ ಮೇಲೆ ಈಗಾಗಲೇ ಮುಡಿಪ್ಪಿವಿನ ಎರಡು ಕಡೆಯಲ್ಲಿ ರಾಬರಿ ನಡೆಸಿದ ಎರಡು ಪ್ರಕರಣ ಹಾಗೂ ಗಾಂಜಾ ಮಾರಾಟ ಮಾಡಿದ ಆರೋಪದಲ್ಲಿ ಕೊಣಾಜೆ ಠಾಣೆಯಲ್ಲಿ ಒಂದು ಪ್ರಕರಣವಿದೆ.

ಬಂಟ್ವಾಳ ಸಹಾಯಕ ಅಧೀಕ್ಷಕ ವೆಲೆಂಟನ್ ಡಿಸೋಜ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಅವರ ನೇತೃತ್ವದಲ್ಲಿ ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ರೆಡ್ಡಿ, ಪ್ರೊಬೆಶನರಿ ಉಪನಿರೀಕ್ಷಕ ಕೃಷ್ಣಕಾಂತ್, ಸಿಬ್ಬಂದಿಗಳಾದ ಪ್ರಸನ್ನ, ಜಯಕುಮಾರ್, ಪ್ರತ್ತಾಪ, ವಿನಾಯಕ, ಹೇಮರಾಜ್ ಅವರ ತಂಡ ತ್ವರಿತ ಕಾರ್ಯಚರಣೆ ನಡೆಸಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English