ಆಟವಾಡುತ್ತಿದ್ದ ಮಗು ಸೀಮೆ ಎಣ್ಣೆ ಸೇವಿಸಿ ಮೃತ್ಯು

11:31 PM, Sunday, January 10th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Ruthikಕಾಸರಗೋಡು : ಮನೆಯಲ್ಲಿ ಆಟವಾಡುತ್ತಿದ್ದ ಮಗು ಸೀಮೆ ಎಣ್ಣೆ ಸೇವಿಸಿದ ಪರಿಣಾಮ ಮೃತಪಟ್ಟ ದಾರುಣ ಘಟನೆ ಉದುಮದಲ್ಲಿ ನಡೆದಿದೆ.

ಉದುಮ ಏರೋಲ್‌ನ ದಾಸ್ ಮತ್ತು ರೇಣುಕಾ ದಂಪತಿ ಪುತ್ರ ಋತಿಕ್ ಮೃತಪಟ್ಟ ಮಗು.

ಬಾಟಲಿಯಲ್ಲಿದ್ದ ಸೀಮೆಎಣ್ಣೆಯನ್ನು ಸೇವಿಸಿದ್ದು , ಮಗು ಅಸ್ವಸ್ಥವಾಗಿ ಬಿದ್ದಿದ್ದು ಸಮೀಪ ಸೀಮೆ ಎಣ್ಣೆ ತುಂಬಿದ್ದ ಬಾಟಲಿ ಪತ್ತೆಯಾಗಿತ್ತು. ತಕ್ಷಣ ಮಗುವನ್ನು ಉದುಮದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಬಳಿಕ ವೈದ್ಯರ ಸಲಹೆಯಂತೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English