ಮಂಗಳೂರು: ಬಿ ಎಸ್ ಯಡಿಯೂರಪ್ಪ ಸಂಪುಟದಲ್ಲಿ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸಚಿವ ಎಸ್.ಅಂಗಾರ ಅವರು ಶುಕ್ರವಾರ ಬೆಳಿಗ್ಗೆ ಮಂಗಳೂರಿಗೆ ಆಗಮಿಸಿದರು.
ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ ಅವರು ಸ್ವಾಗತಿಸಿದರು. ನೂತನ ಸಚಿವರು ವಿಮಾನ ನಿಲ್ದಾಣದಿಂದ ಹೊರ ಬರುತ್ತಿದ್ದಂತೆ ಹೂವಿನ ಹಾಕಿ ಬಿಜೆಪಿ ಮುಖಂಡರುಗಳು, ಕಾರ್ಯಕರ್ತರು ಸ್ವಾಗತಿಸಿದರು . ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಉಮಾನಾಥ್ ಕೊಟ್ಯಾನ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷ ಕಸ್ತೂರಿ ಪಂಜ, ನಿಗಮ ಮಂಡಳಿ ಅಧ್ಯಕ್ಷೆ ರಾಧಾ, ಹರಿಕೃಷ್ಣ ಬಂಟ್ವಾಳ್, ಸಂತೋಷ್ ಕುಮಾರ್ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English