ಹಲವು ಬಾರಿ ಅದೇ ಅಂಗಡಿಯಿಂದ ಮಾಂಸ ಖರೀದಿಸಿದ ವ್ಯಕ್ತಿಯೇ ತೊಕ್ಕೊಟ್ಟು ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ್ದ !

3:41 PM, Saturday, January 16th, 2021
Share
1 Star2 Stars3 Stars4 Stars5 Stars
(4 rating, 1 votes)
Loading...

N.ShashiKumarಮಂಗಳೂರು :  ತೊಕ್ಕೊಟ್ಟುವಿನಲ್ಲಿ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಪೊಲೀಸರು ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ತೊಕ್ಕೊಟ್ಟು ಒಳಪೇಟೆಯಲ್ಲಿ ತಾಯಿ ಜೊತೆ ವಾಸವಿದ್ದ ನಿವಾಸಿ ನಾಗರಾಜ (37) ಎಂದು ಗುರುತಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ  ಆರೋಪಿ ನಾಗರಾಜ ತೊಕ್ಕೊಟ್ಟಿನ ಇದೇ ಬೀಫ್ ಸ್ಟಾಲ್‌ನಿಂದ ಹಲವು ಬಾರಿ ಮಾಂಸ ಖರೀದಿಸಿ ತನ್ನ ಸ್ನೇಹಿತನ ಮನೆಯಲ್ಲಿ ಅಡುಗೆ ಮಾಡಿ ಸೇವಿಸಿದ್ದ ಎಂದು ತಿಳಿಸಿದ್ದಾರೆ.

ಆತ  ಈ ಹಿಂದೆ ಬೀಫ್ ಸ್ಟಾಲ್‌ ಮಾಲಕ ನಲ್ಲಿ ನಿಗದಿತ ಬೆಲೆಗಿಂತ ಅಧಿಕ ಮಾಂಸ ನೀಡುವಂತೆ ಕೇಳಿದ್ದನು. ಈ ವೇಳೆ ಹಣ ಕೊಟ್ಟಷ್ಟೇ ಮಾಂಸ ನೀಡುವುದು, ಹೆಚ್ಚುವರಿ ನೀಡಲಾಗದು ಎಂದು ಅಂಗಡಿಯಾತ ಹೇಳಿದ್ದಾನೆ. ಇದರಿಂದ ಕೋಪಗೊಂಡು ಆರೋಪಿ ಈ ದುಷ್ಕೃತ್ಯ ಎಸಗಿದ್ದಾನೆ ಎಂದು ಒಪ್ಪಿಕೊಂಡಿದ್ದಾಗಿ ಎಂದು  ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಆರೋಪಿಯು ಅದೇದಿನ ಸೀಮೆಎಣ್ಣೆ ಹಾಗೂ ಬೆಂಕಿ ಪೊಟ್ಟಣ ಖರೀದಿಸಿದ್ದನು. ಜ.9ರಂದು ಬೆಳಗ್ಗಿನ ಜಾವ 2 ಗಂಟೆ ಸುಮಾರಿಗೆ ಮಾಂಸದಂಗಡಿ ಬಳಿ ತೆರಳಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಬಳಿಕ ಘಟನೆಯ ಬಗ್ಗೆ ತನ್ನ ತಾಯಿಯ ಬಳಿಯು ಈ ಬಗ್ಗೆ ಹೇಳಿಕೊಂಡಿದ್ದಾನೆ. ಕುಡಿದ ನಶೆಯಲ್ಲಿ ಸುಳ್ಳು ಹೇಳಿದ್ದಾನೆಂದು ಅಂದುಕೊಂಡ ತಾಯಿ ಸುಮ್ಮನೆ ಮಲಗಲು ಹೇಳಿದ್ದಾರೆ. ಬೆಳಗ್ಗೆ ಘಟನೆ ಬೆಳಕಿಗೆ ಬಂದ ಮೇಲೆ ತಾಯಿಗೆ ನೈಜಾಂಶ ತಿಳಿದುಬಂದಿತ್ತು ಎಂದು ಪೊಲೀಸ್ ಆಯುಕ್ತರು ಹೇಳಿದರು.

Nagarajಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಲು ವಿಶೇಷ ತಂಡ ರಚಿಸಿದ್ದರು. ಮಾಂಸದಂಗಡಿ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮರಾ ಫೂಟೇಜ್‌ಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಯಿತು. ಆರೋಪಿಯೇ ಕೃತ್ಯ ನಡೆಸಿರುವುದು ಸಿಸಿಟಿವಿ ಫೂಟೇಜ್‌ನಲ್ಲಿ ಖಚಿತವಾಗಿದೆ. ಪೂರಕ ದಾಖಲೆಗಳ ಸಂಗ್ರಹದ ಬಳಿಕವೇ ಆರೋಪಿಯನ್ನು ಬಂಧಿಸಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದರು.

ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದ್ದು, ಈತನ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಕೃತ್ಯ ನಡೆಸಿರುವುದನ್ನು ವಿಚಾರಣೆಯ ವೇಳೆ ಆರೋಪಿ ಒಪ್ಪಿಕೊಂಡಿದ್ದಾನೆ. ತನಿಖೆ ಮುಂದುವರಿದಿದೆ ಎಂದು ಆಯುಕ್ತರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಹರಿರಾಮ್ ಶಂಕರ್ ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English