ಎಕ್ಕಾರಿನಲ್ಲಿ ನಿರ್ಮಾಣಗೊಳ್ಳಬೇಕಿದ್ದ ಕ್ಷಿಪ್ರ ಕಾರ್ಯಾಚರಣೆ ಪಡೆ ಸ್ಥಳಾಂತರ, ಜಿಲ್ಲೆಗೆ ಮಾಡಿದ ಮೋಸ

2:57 PM, Tuesday, January 19th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

muneerKatiallaಮಂಗಳೂರು : ನಗರ ಹೊರವಲಯದ ಬಡಗ ಎಕ್ಕಾರಿನಲ್ಲಿ ನಿರ್ಮಾಣಗೊಳ್ಳಬೇಕಿದ್ದ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್ ಎಎಫ್) ಘಟಕ ಯಾರ ಅರಿವಿಗೂ ಬಾರದಂತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಸ್ಥಳಾಂತರಿಸಿ  ಶಿಲಾನ್ಯಾಸ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಹಿಂದೆ ಕರಾವಳಿಯ ಬ್ಯಾಂಕುಗಳು ಉತ್ತರ ಭಾರತದ ಬ್ಯಾಂಕುಗಳೊಂದಿಗೆ ವಿಲೀನ, ಮಂಗಳೂರು ವಿಮಾನ ನಿಲ್ದಾಣ ಅದಾನಿ ಕಂಪೆನಿಗೆ ಹಸ್ತಾಂತರ, ಇದೀಗ ಕ್ಷಿಪ್ರ ಕಾರ್ಯಾಚರಣೆ ಪಡೆಯ ಘಟಕ ಸ್ಥಳಾಂತರ ಸಂಸದ ನಳಿನ್ ಕುಮಾರ್ ಕಟೀಲ್ ವೈಫಲ್ಯ ಎಂದು ಮುನೀರ್‌ ಕಾಟಿಪಳ್ಳ ಆರೋಪಿಸಿದ್ದಾರೆ.

ಈ ವೈಫಲ್ಯದ ಜವಾಬ್ದಾರಿಯನ್ನು ಸಂಸದರು ವಹಿಸಿಕೊಂಡು ಜಿಲ್ಲೆಯ ಜನರಲ್ಲಿ ಕ್ಷಮೆಯಾಚಿಸಬೇಕು ಮತ್ತು ವಿವರಣೆ ನೀಡಬೇಕು ಎಂದು ಮುನೀರ್‌ ಕಾಟಿಪಳ್ಳ ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಮಂಗಳೂರು ತಾಲೂಕಿನ ಬಡಗ ಎಕ್ಕಾರು ಗ್ರಾಮದಲ್ಲಿ ಐವತ್ತು ಎಕರೆ ಸ್ಥಳವನ್ನು ಗುರುತಿಸಿ ಕ್ಷಿಪ್ರ ಕಾರ್ಯಾಚರಣೆ ಪಡೆ ಘಟಕಕ್ಕಾಗಿ ಕಾದಿರಿಸಲಾಗಿತ್ತು ಎಂದು ಮುನೀರ್‌ ತಿಳಿಸಿದರು.

ಕೋಮು ಹಿಂಸಾಚಾರ ಸಂಭವಿಸುವ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಮಂಗಳೂರು ಒಂದು ಕೇಂದ್ರ ಭಾಗವಾಗಿದೆ. ಕ್ಷಿಪ್ರ ಕಾರ್ಯಾಚರಣೆ ಪಡೆಯು ಮಂಗಳೂರಿನಲ್ಲಿ ಸ್ಥಾಪನೆಯಾದರೆ, ಅದು ವಿಮಾನ ನಿಲ್ದಾಣ ಸಹಿತ ಸಾರಿಗೆ ಸಂಪರ್ಕದ ಸೌಲಭ್ಯದಿಂದಾಗಿ ದೂರದ ಜಿಲ್ಲೆಗಳಿಗೂ ತಲುಪಲು ಅನುಕೂಲಕರವಾಗಿತ್ತು. ದ.ಕ. ಜಿಲ್ಲೆಯಲ್ಲಂತೂ ಈ ಘಟಕದ ಕಾರ್ಯಾಚರಣೆಯು ಹಲವು ಹಿಂಸಾಚಾರಗಳಿಗೆ ಕಡಿವಾಣ ಹಾಕುಲು  ಸಹಕಾರಿಯಾಗಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಯಾವ ರೀತಿಯಿಂದಲೂ ಸೂಕ್ತವಲ್ಲದ ಭದ್ರಾವತಿಗೆ ರಾತ್ರೋರಾತ್ರಿ  ಕ್ಷಿಪ್ರ ಕಾರ್ಯಾಚರಣೆ ಪಡೆ ಘಟಕ ಸ್ಥಳಾಂತರಿಸಿ ಶಿಲಾನ್ಯಾಸ ನೆರವೇರಿಸಲಾಗಿದೆ. ಇದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಅವರ ಅಸಮರ್ಥತೆಯೇ ನೇರ ಕಾರಣವಾಗಿದೆ ಎಂದು ಟೀಕಿಸಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English