- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬಂಟ್ವಾಳ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ, ಉಗ್ರರೊಂದಿಗೆ ಸಂಪರ್ಕ ಶಂಕೆ

satalite phone [1]ಮಂಗಳೂರು : ನಿಷೇಧಿತ ಸ್ಯಾಟಲೈಟ್ ಫೋನ್ ಕರಾವಳಿಯ ಜಿಲ್ಲೆಗಳಲ್ಲಿ ಕಾರ್ಯಪ್ರವೃತ್ತವಾಗಿರುವುದು ಬೆಳಕಿಗೆ  ಬಂದಿದೆ.  ಇದರಿಂದಾಗಿ ಉಗ್ರರ ಚಟುವಟಿಕೆ ಆರಂಭವಾಗಿದೆ ಎನ್ನಲಾಗುತ್ತಿದ್ದು. ಕರಾವಳಿಯ ದಟ್ಟಾರಣ್ಯ ಪ್ರದೇಶಗಳಲ್ಲಿ ಮತ್ತೆ ಸ್ಯಾಟ್ ಲೈಟ್ ಫೋನ್ ಆಕ್ಟಿವ್ ಆಗಿದೆ. ಕಳೆದ 10 ದಿನಗಳಲ್ಲಿ 3 ಬಾರಿ ಸ್ಯಾಟಲೈಟ್ ಫೋನ್ ಆಕ್ಟಿವ್ ಆದ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಉತ್ತರ ಕನ್ನಡ, ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಾಡು ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಲೊಕೇಷನ್ ಟ್ರೇಸ್ ಮಾಡಲಾಗಿದೆ. ದ.ಕ ಜಿಲ್ಲೆಯ ಬಂಟ್ವಾಳ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಬಳಕೆಯಾಗಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.