ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲಾರ ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ವಿಕೃತಿ ಮೆರೆದಿರುವ ದುಷ್ಕರ್ಮಿಗಳು ಭಗವಾಧ್ವಜ ಹರಿದು ಹಾಕಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ.
ಮಂಗಳವಾರ ಸಂಜೆ ಉಳ್ಳಾಲ ಜಂಕ್ಷನ್ನಿನಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಮತ್ತು ಬಿಜೆಪಿ ಮುಖಂಡರ ಪತ್ರಿಕೆ ಜಾಹೀರಾತಿನಲ್ಲಿ ಅವಾಚ್ಯ ಪದಗಳನ್ನು ಬರೆದಿರುವ ಪತ್ರ ಇರುವುದು ಪತ್ತೆಯಾಗಿತ್ತು,
ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ಈ ಕೃತ್ಯ ನಡೆದಿದೆ. ಮಂದಿರದ ಬಾಗಿಲು ಒಡೆಯಲು ಯತ್ನಿಸಿದ್ದಾರೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೇಟಿ ನೀಡಿದ್ದಾರೆ. ಕಳ್ಳತನಕ್ಕೆ ಯತ್ನಿಸಿರುವವರೇ ಈ ದುಷ್ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
Click this button or press Ctrl+G to toggle between Kannada and English