ಹುಣಸೋಡು ಕಲ್ಲು ಕ್ವಾರಿ ದುರಂತದಲ್ಲಿ 8 ಕ್ಕೂ ಹೆಚ್ಚು ಮಂದಿ ಸಾವು

2:07 PM, Friday, January 22nd, 2021
Share
1 Star2 Stars3 Stars4 Stars5 Stars
(5 rating, 1 votes)
Loading...

quari Exxplosionಬೆಂಗಳೂರು : ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿ ನಿನ್ನೆ ರಾತ್ರಿ ಭಾರೀ ಜಿಲೆಟಿನ್ ಸ್ಫೋಟವಾದ ದುರ್ಘಟನೆ ಸಂಭವಿಸಿದೆ. ಕಲ್ಲು ಕ್ವಾರಿಯೊಂದರ ಬಳಿ ರಾತ್ರಿ 10:30ಕ್ಕೆ ಸಂಭವಿಸಿದೆ ಈ ಅವಘಡದಲ್ಲಿ 8 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದು ತಿಳಿದುಬಂದಿದೆ.

ಸ್ಫೋಟಗೊಂಡ ಜಿಲೆಟಿನ್ಗಳನ್ನ ಹೊತ್ತು ಸಾಗುತ್ತಿದ್ದ ಲಾರಿ ಸಂಪೂರ್ಣ ನಾಶವಾಗಿದೆ. ಕೆಲವರ ಪ್ರಕಾರ, ಲಾರಿಯಲ್ಲಿದ್ದ 50 ಬಾಕ್ಸ್ಗಳ ಡೈನಮೈಟ್ಗಳು ಒಂದಾದ ಒಂದರಂತೆ ಸ್ಫೋಟಗೊಂಡಿವೆ ಎನ್ನಲಾಗಿದೆ.

ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಅಧಿಕಾರಿಗಳು ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ, ಇನ್ನಷ್ಟು ಜಿಲೆಟಿನ್ ಕಡ್ಡಿಗಳು ಸ್ಫೋಟಗೊಳ್ಳುವ ಅಪಾಯ ಇದ್ದರಿಂದ ಬಹಳ ಎಚ್ಚರಿಕೆಯಿಂದ ಅಪಘಾತದ ಸ್ಥಳಕ್ಕೆ ಹೋಗಲಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಲ್ಲು ಕ್ವಾರಿಯಲ್ಲಿ ಬಿಹಾರ ಮೂಲದ 15ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರೆನ್ನಲಾಗಿದೆ. ಅವರಲ್ಲಿ ಯಾರೂ ಬದುಕಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. ಸ್ಫೋಟಗೊಂಡ ರಭಸಕ್ಕೆ ದೇಹಗಳು ಗುರುತು ಸಿಗಲಾರದಷ್ಟು ಛಿದ್ರಗೊಂಡಿವೆ.

ಜಿಲೆಟಿನ್ ಕಡ್ಡಿಗಳ ಸ್ಫೋಟಕ್ಕೆ ಇನ್ನೂ ನಿಖರ ಕಾರಣ ಗೊತ್ತಾಗಿಲ್ಲ.

ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ  ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English