ಬೆಂಗಳೂರು: ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ದಾಶ್ರಮದಲ್ಲಿ ಬಿಗ್ ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಟಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡವರು.
ಕಳೆದ ವರ್ಷ ಜುಲೈ ತಿಂಗಳಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜಯಶ್ರೀ ರಾಮಯ್ಯ, ತಮ್ಮ ಫೇಸ್ ಬುಕ್ ನಲ್ಲಿ “ಖಿನ್ನತೆ ಮತ್ತು ಈ ಜಗತ್ತಿಗೆ ಗುಡ್ ಬೈ” ಎಂದು ಬರೆದುಕೊಳ್ಳುವ ಮೂಲಕ ಆತಂಕ ಸೃಷ್ಟಿಸಿದ್ದರು. ಅಲ್ಲದೆ ಈ ಪೋಸ್ಟ್ ಹಾಕಿದ ನಂತರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜಯಶ್ರೀಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಷ್ಟೆಲ್ಲಾ ಆದ ಬಳಿಕ ಸುದೀಪ್ ಅವರು ಜಯಶ್ರೀ ಜೊತೆ ಫೋನಿನಲ್ಲಿ ಮಾತನಾಡಿ ಧರ್ಯ ತುಂಬಿದ್ದರು, ಈ ನಟಿ ಜಯಶ್ರೀ ಫೇಸ್‍ಬುಕ್‍ನಲ್ಲಿ ಬರೆದುಕೊಳ್ಳುವ ಮೂಲಕ ಸುದೀಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. “ನಿಮ್ಮ ಕಾಳಜಿಗೆ ಧನ್ಯವಾದಗಳು ಸುದೀಪ್ ಸರ್. ನೀವು ನನ್ನನ್ನು ಬದುಕಿಸಿದ್ದೀರಿ. ಸುದೀಪ್ ಅವರ ತಂಡದ ಸದಸ್ಯರು, ನನ್ನ ಸ್ನೇಹಿತರು ಮತ್ತು ಅಭಿಮಾನಿಗಳನ್ನು ನಾನು ತುಂಬಾ ಪ್ರೀತಿಸುತ್ತೇನೆ. ನಿಮ್ಮನ್ನೆಲ್ಲ ಆತಂಕಗೊಳ್ಳುವಂತೆ ಮಾಡಿದ್ದಕ್ಕೆ ಕ್ಷಮಿಸಿ. ನಾನು ಮತ್ತೆ ಸಹಜ ಸ್ಥಿತಿಗೆ ಬಂದಿದ್ದೇನೆ. ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು” ಎಂದು ಜಯಶ್ರೀ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದರು.
ಮತ್ತೊಂದು ಬಾರಿ ದಯ ಮರಣ ದಯಪಾಲಿಸಿ ಎಂದು ಅಂಗಲಾಚಿಕೊಂಡಿದ್ದರು. ಆದಾಗ ಬಳಿಕ ಕೇಶ ಮುಂಡನ ಮಾಡಿಕೊಂಡು ಮತ್ತೆ ಸುದ್ದಿಯಲ್ಲಿದ್ದರು.
ಉಪ್ಪು ಹುಳಿ ಖಾರ ಮತ್ತು ಕನ್ನಡ್ ಗೊತ್ತಿಲ್ಲ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಜಯಶ್ರೀ ರಿಯಾಲಿಟಿ ಶೋ ಬಿಗ್‍ಬಾಸ್ ಮೂಲಕವೇ ಖ್ಯಾತಿ ಪಡೆದುಕೊಂಡಿದ್ದರು. ಆದರೆ, ಇಂದು ಆತ್ಮಹತ್ಯೆ ಮಾಡಿದ್ದಾರೆ.
Click this button or press Ctrl+G to toggle between Kannada and English