ಮಂಗಳೂರು : ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾಡಳಿತದಿಂದ ವತಿಯಿಂದ 72ನೇ ಗಣರಾಜ್ಯೋತ್ಸವು ಮಂಗಳವಾರ ನಡೆಯಿತು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ಗೈದು ಪರೇಡ್ ವೀಕ್ಷಿಸಿದರು.
ಗಣರಾಜ್ಯೋತ್ಸವದ ಸಂದೇಶ ನೀಡಿದ ಅವರು ಜಿಲ್ಲೆಯ ಅಭಿವೃದ್ಧಿಗಾಗಿ ಸರಕಾರ ಅನೇಕ ಜನಪಯೋಗಿ ಯೋಜನೆಗಳನ್ನು ಕೈಗೆತ್ತಿಕೊಂಡಿವೆ. ಆ ಪೈಕಿ ಮೂರು ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಕೊಚ್ಚಿ ಮಂಗಳೂರು ನಡುವೆ 450 ಕಿಲೋ ಮೀಟರ್ ಉದ್ದದ ನೈಸರ್ಗಿಕ ಅನಿಲ ಪೈಪ್ ಲೈನ್. ಕುಳಾಯಿಯಲ್ಲಿ196.51 ಕೋಟಿರೂಪಾಯಿ ವೆಚ್ಚದ ಮೀನುಗಾರಿಕಾ ಬಂದರು. ದೇಶದ ಮೊದಲ ಕೋಸ್ಟ್‌ಗಾರ್ಡ್ ಅಕಾಡಮಿಯು ಬಜ್ಪೆ ಕೆಂಜಾರಿನಲ್ಲಿ ಸ್ಥಾಪನೆಯಾಗಲಿದೆ. ಅದಕ್ಕಾಗಿ ಕೇಂದ್ರ ಸರಕಾರವು 1 ಸಾವಿರ ಕೋ.ರೂ. ಅನುದಾನ ಬಿಡುಗಡೆ ಮಾಡಿದೆ ಎಂದರು.
ಹಳೆ ಕೇಂದ್ರ ಮಾರುಕಟ್ಟೆ ಜಾಗದಲ್ಲಿ 144 ಕೋ.ರೂ. ವೆಚ್ಚದಲ್ಲಿ 11 ಅಂತಸ್ತಿನ ಮಾರುಕಟ್ಟೆ ನಿರ್ಮಾಣಕ್ಕೆ ಹಾಗೂ 22 ಕೋ.ರೂ. ವೆಚ್ಚದಲ್ಲಿ ಎಮ್ಮೆಕೆರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ, ಪಂಪ್ ವೆಲ್‌ನಲ್ಲಿ 445 ಕೋ.ರೂ. ವೆಚ್ಚದಲ್ಲಿ ಕೇಂದ್ರ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ ಎಂದರು.
ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ, ಪೊಲೀಸ್ ಆಯುಕ್ತ ಶಶಿಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಕುಮಾರ್, ಮೇಯರ್ ದಿವಾಕರ್ ಪಾಂಡೇಶ್ವರ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ದಿ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಇದರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English