ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ನಿರ್ದೇಶಕರ ಮನೆಗೆ ಎಸಿಬಿ ದಾಳಿ

2:19 PM, Tuesday, February 2nd, 2021
Share
1 Star2 Stars3 Stars4 Stars5 Stars
(No Ratings Yet)
Loading...

Jayarajಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನೆಗಳ ವಿಭಾಗದ ಜಂಟಿ ನಿರ್ದೇಶಕರೊಬ್ಬರ ಮೇಲೆ ಎಸಿಬಿ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಮನಪಾ ನಗರ ಯೋಜನೆಗಳ ವಿಭಾಗದ ಕೆ.ವಿ. ಜಯರಾಜ್ ಎಂಬವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಜಯರಾಜ್ ಅವರ ಬಿಜೈ ಬಳಿ ಇರುವ ಮನೆ ಮೇಲೆ ಮಂಗಳವಾರ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರಿದಿದೆ. ಇದರ ಜೊತೆಗೆ ಅವರ ಕಚೇರಿ, ನಗರದ ಪಡೀಲ್ ಬಳಿಯ ಜಯರಾಜ್ ತಂದೆಯ ಮನೆ, ಕೇರಳದಲ್ಲಿರುವ ಜಯರಾಜ್ ಪತ್ನಿಯ ಮನೆ ಮೇಲೂ ದಾಳಿ ನಡೆಸಿದ್ದು, ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಎಸಿಬಿ ಎಸ್ಪಿ ಬೋಪಯ್ಯ, ಡಿವೈಎಸ್ಪಿ ಕೆ.ಸಿ.ಪ್ರಕಾಶ್‌ ಇನ್ಸ್‌ಪೆಕ್ಟರ್ ಗಳಾದ ಶ್ಯಾಂಸುಂದರ್‌, ಗುರುರಾಜ್‌ ಹಾಗೂ ಸಿಬ್ಬಂದಿ ಇದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English