- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ವೃದ್ಧೆ ತಾಯಿಯನ್ನೇ ರಸ್ತೆಯಲ್ಲಿ ಬಿಟ್ಟ ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತೆ ಹಾಗೂ ಮನೆಯವರು

elderly Woman [1]ಬೆಳ್ತಂಗಡಿ  : ಐದು ಜನ ಮಕ್ಕಳು  ವೃದ್ಧೆ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವ ಘಟನೆ ಬೆಳ್ತಂಗಡಿಯ ಕಳಿಯದ ನಾಳ ಎಂಬಲ್ಲಿ ನಡೆದಿದೆ. ಈ ವೃದ್ಧೆ ತಾಯಿಯ ಮಕ್ಕಳ ಪೈಕಿ ಒಬ್ಬರು ಆಶಾ ಕಾರ್ಯಕರ್ತೆಯಾಗಿದ್ದು, ಪುತ್ರನೊಬ್ಬ ಪೊಲೀಸ್ ಸಿಬ್ಬಂದಿಯಾಗಿ ಸೇವೆಯಲ್ಲಿದ್ದಾನೆ ಎಂದು ಹೇಳಲಾಗಿದೆ.

ಒಬ್ಬ ಪುತ್ರ ಮಂಗಳೂರಿನಲ್ಲಿ  ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನಿಬ್ಬರು ಪುತ್ರರು ಖಾಸಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಪುತ್ರಿಯರಲ್ಲಿ ಒಬ್ಬರು ಗೃಹಿಣಿಯಾಗಿದ್ದು, ಮತ್ತೊಬ್ಬರು ಆಶಾ ಕಾರ್ಯಕರ್ತೆಯಾಗಿದ್ದಾರೆ.

ಬೀದಿಯಲ್ಲಿದ್ದ ವೃದ್ದೆಯನ್ನು ಗಮನಿಸಿದ ಸಾರ್ವಜನಿಕರು ದ.ಕ. ಜಿಲ್ಲಾ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ತುರ್ತು ಸ್ಪಂದನಾ ವಾಹನ ಸ್ಥಳಕ್ಕೆ ತೆರಳಿ ವೃದ್ಧೆಯನ್ನು ರಕ್ಷಣೆ ಮಾಡಿದ್ದಾರೆ.

ಸದ್ಯ ವೃದ್ಧ ತಾಯಿಯನ್ನು ಅವರ ಪುತ್ರಿಯ ಮನೆಗೆ ಕಳುಹಿಸಲಾಗಿದೆ. ಇನ್ನು ಸೂಕ್ತ ಕಾನೂನು ಕ್ರಮಕ್ಕಾಗಿ ಪ್ರಕರಣವನ್ನು ಬೆಳ್ತಂಗಡಿ ಠಾಣೆಗೆ ಹಸ್ತಾಂತರಿಸಲಾಗಿದೆ. ಈ ನಡುವೆ ವೃದ್ದೆಯನ್ನು ಬೀದಿಪಾಲು ಮಾಡಿದ್ದ ಮನೆಯವರ ವಿರುದ್ಧ ಸೂಕ್ತ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.