ಕಲ್ಲಡ್ಕದಲ್ಲಿ ಅನಿಲ ಟ್ಯಾಂಕರ್ ಮತ್ತು ಕಂಟೈನರ್ ಢಿಕ್ಕಿ

12:17 AM, Thursday, February 4th, 2021
Share
1 Star2 Stars3 Stars4 Stars5 Stars
(No Ratings Yet)
Loading...

Gas Tanker ಮಂಗಳೂರು  : ಅನಿಲ ಟ್ಯಾಂಕರ್ ಮತ್ತು ಕಂಟೈನರ್ ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ನಡೆದಿದೆ.

ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ಮತ್ತು ಬೆಂಗಳೂರು ಕಡೆ ಹೋಗುತ್ತಿದ್ದ ಕಂಟೈನರ್ ನಡುವೆ ಅಪಘಾತ ಸಂಭವಿಸಿದೆ. ಆದರೆ ಗ್ಯಾಸ್ ಟ್ಯಾಂಕರ್ ಖಾಲಿ ಇದ್ದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಬುಧವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಕಲ್ಲಡ್ಕ ಪೂರ್ಲಿಪ್ಪಾಡಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣೆ ಎಸ್.ಐ. ರಾಜೇಶ್ ಕೆ.ವಿ. ಮತ್ತು ಸಿಬ್ಬಂದಿ ಆಗಮಿಸಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English