ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ ಆಯ್ಕೆ

3:25 PM, Thursday, February 4th, 2021
Share
1 Star2 Stars3 Stars4 Stars5 Stars
(No Ratings Yet)
Loading...

Lukmanಮಂಗಳೂರು : ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಕೊನೆಗೂ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯಾದ್ಯಂತ ಜನವರಿ 10,11,12 ನೇ ದಿನಾಂಕದಂದು ಯುವ ಕಾಂಗ್ರೆಸ್ ಬ್ಲಾಕ್, ಜಿಲ್ಲೆ ಮತ್ತು ರಾಜ್ಯ ಮಟ್ಟಕ್ಕೆ ಚುನಾವಣೆ ನಡೆಸಲಾಗಿತ್ತು. ಚುನಾವಣೆಯು ಪಾರದರ್ಶಕವಾಗಿ ನಡೆಯಬೇಕೆಂಬ ನಿಟ್ಟಿನಲ್ಲಿ ಮೊಬೈಲ್ ಅಪ್ಲಿಕೇಶನ್ ಮೂಲಕ ಚುನಾವಣೆ ನಡೆಸಲಾಗಿತ್ತು.

ಅಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ 5573 ಮತಗಳನ್ನು ಗಳಿಸಿದ್ದರೆ, ನಿಕಟಸ್ಫರ್ಧಿ ಗಿರೀಶ್ ಆಳ್ವಾ 4169 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಹಮ್ಮದ್ ಶುಹೈಬ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 14,065 ಮತಗಳಲ್ಲಿ 3,518 ಮತಗಳನ್ನು ತಿರಸ್ಕರಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English