ಕುಳಾಯಿ ಕಾರು ಅಪಘಾತ ಮಹಿಳೆ ಸಾವು, ಮೂವರಿಗೆ ಗಂಭೀರ ಗಾಯ

3:51 PM, Thursday, February 4th, 2021
Share
1 Star2 Stars3 Stars4 Stars5 Stars
(No Ratings Yet)
Loading...

Car Accident Kulaiಮಂಗಳೂರು : ಕುಳಾಯಿ ಸಮೀಪ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಬುಧವಾರ ರಾತ್ರಿ  ನಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತ ಮಹಿಳೆಯನ್ನು ಬೋಂದೆಲ್‌ ನಿವಾಸಿ ಸುಹಾನಾ (26) ಎಂದು ಗುರುತಿಸಲಾಗಿದೆ‌.

ಕಾರಿನಲ್ಲಿ‌ ಸುಹಾನಾರ ಸಹೋದರಿ ಫಾತಿಮಾ ಶೌರೀನ್, ಸಹೋದರರಾದ ರಾಹಿಲ್ ಶಮೀಮ್ ಮತ್ತು ರಾಝಿಕ್ ಶಹಾನ್ ಗಂಭೀರ ಗಾಯಗಳಾಗಿವೆ, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಮದುವೆ ಕಾರ್ಯಕ್ರಮಕ್ಕೆ ತೆರಳಲು ಸಿದ್ಧತೆಯಲ್ಲಿತ್ತು,  ಕಾರು ಚಲಾಕ ರಾಹಿಲ್ ಶಮೀಮ್ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ.

ಕಾರಲ್ಲಿದ್ದ ನಾಲ್ಕು ಮಂದಿಗೂ ಗಾಯವಾಗಿದ್ದು, ಆ ಪೈಕಿ‌ ಸುಹಾನಾ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ‌1:33ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ಸುಹಾನಾ ಅವರು ಪತಿ ಮತ್ತು ಇಬ್ಬರು ಪುತ್ರರನ್ನು‌ಅಗಲಿದ್ದಾರೆ.

ಈ ಬಗ್ಗೆ ಸಂಚಾರ ಉತ್ತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

                       

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English