ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ಸಚಿವ ಎಸ್.ಅಂಗಾರ ಮತ್ತು ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅಭಿನಂದನೆ

3:12 PM, Saturday, February 6th, 2021
Share
1 Star2 Stars3 Stars4 Stars5 Stars
(No Ratings Yet)
Loading...

SCDCC Bank ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ರಾಜ್ಯ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿ ನೇಮಕಗೊಂಡ ಕೋಟ ಶ್ರೀನಿವಾಸ ಪೂಜಾರಿ ಮತ್ತು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರಿಗೆ  ಶನಿವಾರ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಎಸ್ ಸಿಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿ ಸಭಾಂಗಣದಲ್ಲಿಂದು ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡುತ್ತಾ   ಸಹಕಾರಿ ಕ್ಷೇತ್ರ ದ ಅಭಿವೃದ್ಧಿಗೆ ಸಚಿವರ ಸಹಕಾರ ದೊರೆಯುವಂತಾಗಲಿ ಎಂದು ಶುಭ ಹಾರೈಸಿದರು.

ನಾನು ಓರ್ವ ಸಾಮಾನ್ಯ ಕೂಲಿ ಕಾರ್ಮಿಕ. ಸಂಘಟನೆ, ಜನರು ಈ ಸ್ಥಾನಕ್ಕೆ ಏರಲು ಕಾರಣರಾಗಿದ್ದಾರೆ. ಜನರರ ನಂಬಿಕೆಗೆ ಚ್ಯುತಿಯಾಗದಂತೆ ಕಾರ್ಯ ನಿರ್ವಹಿಸುತ್ತೇನೆ. ಸಹಕಾರಿ ರಂಗದ ಬೆಳವಣಿಗೆ ಸದಾ ಸಹಕಾರ ನೀಡುತ್ತೇನೆ ಎಂದು ಸಚಿವ ಎಸ್ .ಅಂಗಾರ ನುಡಿದರು.

ಸೇವೆಗೆ ರಾಜಕಾರಣ ಎಂದಾಗಿದ್ದ ರಾಜಕಾರಣ ದಿನದಿಂದ ದಿನಕ್ಕೆ ಸೂಕ್ಷ್ಮವಾಗುತ್ತಾ ಬದಲಾಗಿದೆ. ಈ ಸಂದರ್ಭದಲ್ಲಿ ಸಂವಿಧಾನದ ಆಶಯದಂತೆ ಬದ್ಧತೆ ಯೊಂದಿಗೆ ಕಾರ್ಯ ನಿರ್ವಹಿಸುವುದಾಗಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ ತಿಳಿಸಿದರು.

ಇದೇ ಸಂದರ್ಭ ಮುಖ್ಯ ಅತಿಥಿಗಳಾಗಿ ನಬಾರ್ಡ್‌ನ ಮುಖ್ಯ ಮಹಾಪ್ರಬಂಧಕ ನೀರಜ್ ಕುಮಾರ್ ವರ್ಮ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನ ಅಧ್ಯಕ್ಷ ಬೆಳ್ಳಿ ಪ್ರಕಾಶ್ ರನ್ನು ಬ್ಯಾಂಕ್ ವತಿಯಿಂದ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಅಪೆಕ್ಸ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ವೆಂಕಟ ಸ್ವಾಮಿ, ನಬಾರ್ಡ್ ಬ್ಯಾಂಕ್ ನ ಡಿಜಿಎಂ ಸಂಗೀತಾ ಕರ್ತಾ, ಬ್ಯಾಂಕ್ ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ.ರಾಜರಾಮ್, ಭಾಸ್ಕರ ಎಸ್. ಕೋಟ್ಯಾನ್, ವಾದಿರಾಜ ಶೆಟ್ಟಿ, ಕೆ.ಎಸ್.ದೇವರಾಜ್, ಎಸ್.ರಾಜು ಪೂಜಾರಿ, ಶಶಿಕುಮಾರ್ ರೈ, ಎಸ್.ಬಿ.ಜಯರಾಮ ರೈ, ದೇವಿಪ್ರಸಾದ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಹರಿಶ್ಚಂದ್ರ, ಮಹೇಶ್ ಹೆಗ್ಡೆ, ಜೈರಾಜ್, ಅಶೋಕ್ ಕುಮಾರ್, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಸಹಕಾರಿ ಸಂಘಗಳ ಉಪ ನಿಬಂಧಕ ಪ್ರವೀಣ್ ಬಿ.ನಾಯಕ್, ಚಿತ್ರದುರ್ಗ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಆರ್.ಗಿರೀಶ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರವೀಣ್, ಎಸ್ ಸಿಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಬಿ., ಮೀನುಗಾರಿಕಾ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ಯಶ್ಪಾಲ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ನಿರ್ದೇಶಕ ಶಶಿಕುಮಾರ್ ರೈ ಸ್ವಾಗತಿಸಿದರು. ಡಿಜಿಎಂ ಗೋಪಾಲಕೃಷ್ಣ ವಂದಿಸಿದರು. ಲಕ್ಷ್ಮಣ್ ಮಲ್ಲೂರು ಕಾರ್ಯ ಕ್ರಮ ನಿರೂಪಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English