ಬೈಕಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಬೊಲೆರೊ, ಓರ್ವ ಮೃತ್ಯು

5:42 PM, Monday, February 8th, 2021
Share
1 Star2 Stars3 Stars4 Stars5 Stars
(No Ratings Yet)
Loading...

Kashi Matt Accidentಬಂಟ್ವಾಳ : ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ಸೋಮವಾರ ನಡೆದಿದೆ.

ಮಾಣಿ ಬರಿಮಾರು ನಿವಾಸಿ ಬಾಲಕೃಷ್ಣ (55) ಮೃತರು ಎಂದು ಗುರುತಿಸಲಾಗಿದೆ.

ಬೈಕ್ ಹಾಗೂ ಬೊಲೆರೊ ವಿಟ್ಲದಿಂದ ಉಕ್ಕುಡ ಮಾರ್ಗವಾಗಿ ತೆರಳುತ್ತಿದ್ದು, ಕಾಶಿಮಠ ಸಮೀಪ ಬೊಲೆರೊ ಬೈಕಿನ ಹಿಂಭಾಗಕ್ಕೆ ಢಿಕ್ಕಿಯಾಗಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಬಾಲಕೃಷ್ಣ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣೆ ಎಸ್.ಐ ವಿನೋದ್ ರೆಡ್ಡಿ ನೇತೃತ್ವದ ಪೊಲೀಸರ ತಂಡ ತೆರಳಿ ಮಾಹಿತಿ ಸಂಗ್ರಹಿಸಿದೆ. ಮೃತದೇಹವನ್ನು ವಿಟ್ಲ ಸರಕಾರಿ  ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಬೊಲೆರೊವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

     

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English