ರೆಂಜಿಲಾಡಿಯಲ್ಲಿ ಪತಿ, ಪತ್ನಿ ಮೇಲೆ ಚಿರತೆ ದಾಳಿ

1:03 PM, Friday, February 12th, 2021
Share
1 Star2 Stars3 Stars4 Stars5 Stars
(No Ratings Yet)
Loading...

chita ಕಡಬ : ಕುಟ್ರುಪ್ಪಾಡಿ ಗ್ರಾಮದ ರೆಂಜಿಲಾಡಿ ಎಂಬಲ್ಲಿ ಚಿರತೆ ದಾಳಿಯಿಂದ ಪತಿ, ಪತ್ನಿ ಗಾಯಗೊಂಡ ಘಟನೆ ಕಡಬ ತಾಲೂಕಿನ  ಶುಕ್ರವಾರ ಬೆಳಗಿನ ಜಾವ ನಡೆದಿದೆ.

ರೆಂಜಿಲಾಡಿಯ ಹೇರ ನಿವಾಸಿಗಳಾದ ಚಂದ್ರಶೇಖರ್ ಕಾಮತ್ ಹಾಗೂ ಅವರ ಪತ್ನಿ ಸೌಮ್ಯಾ ಕಾಮತ್ ಎಂಬವರು ಗಾಯಗೊಂಡಿದ್ದಾರೆ.

ಇವರಿಬ್ಬರು ತೋಟದಲ್ಲಿ ಸ್ಪಿಂಕ್ಲರ್ ಬದಲಾಯಿಸಲೆಂದು ಶುಕ್ರವಾರ ಮುಂಜಾವ 1:304 ಸುಮಾರಿಗೆ ತೆರಳಿದ್ದ ವೇಳೆ ಚಿರತೆ ದಾಳಿ ನಡೆಸಿದೆಯೆನ್ನಲಾಗಿದೆ.

ಚಿರತೆ ಮೊದಲು ಚಂದ್ರಶೇಖರ್ ಅವರ ಮೇಲೆ ದಾಳಿ ನಡೆಸಿದೆ. ಈ ವೇಳೆ ಅವರ ರಕ್ಷಣೆಗೆ ಧಾವಿಸಿದ ಸೌಮ್ಯಾರ ಮೇಲೂ ಅದು ದಾಳಿ ನಡೆಸಿದೆ. ಈ ವೇಳೆ ತಮ್ಮಲ್ಲಿದ್ದ ಟಾರ್ಚ್ ನ ಬೆಳಕನ್ನು ಚಿರತೆಯ ಕಣ್ಣಿಗೆ ಬೀಳುವಂತೆ ಮಾಡಿ ಅದರ ದಾಳಿಯಿಂದ ತಪ್ಪಿಸಿಕೊಳ್ಳುವಲ್ಲಿ ದಂಪತಿ ಯಶಸ್ವಿಯಾಗಿದ್ದಾರೆ.

ದಾಳಿಯಿಂದ ಗಾಯಗೊಂಡಿರುವ ಇಬ್ಬರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English