- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ವಿದ್ಯಾರ್ಥಿನಿಗೆ ಮೈ ಮುಟ್ಟಿ ಕಿರುಕುಳ ಓರ್ವನನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು

Buss [1]ಉಪ್ಪಿನಂಗಡಿ:  ವಿದ್ಯಾರ್ಥಿನಿಯೋರ್ವಳಿಗೆ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಿರುಕುಳ ನೀಡಿದ ಆರೋಪದಲ್ಲಿ ಉಪ್ಪಿನಂಗಡಿ ಪೊಲೀಸರು ಓರ್ವನನ್ನು  ವಶಕ್ಕೆ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಮಗಳೂರು ನಿವಾಸಿ ಸೈಪುಲ್ಲಾ (32) ಬಂಧಿತ ಆರೋಪಿಯಾಗಿದ್ದಾನೆ.

ಧರ್ಮಸ್ಥಳದಿಂದ ಉಪ್ಪಿನಂಗಡಿಯತ್ತ ಸಂಚರಿಸುತ್ತಿದ್ದ ಬಸ್‍ನಲ್ಲಿ ಈ ಘಟನೆ ನಡೆದಿದ್ದು, ಈತ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಗೆ ಮೈ ಮುಟ್ಟಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಇದನ್ನು ಆಕ್ಷೇಪಿಸಿದ ವಿದ್ಯಾರ್ಥಿನಿ ಈ ಬಗ್ಗೆ ಬಸ್ಸಿನ ನಿರ್ವಾಹಕರಿಗೆ ದೂರು ನೀಡಿದ್ದು, ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಲು ನೆರವಾದರು.

ಉಪ್ಪಿನಂಗಡಿ ಪೊಲೀಸರು ಕಿರುಕುಳಕ್ಕೊಳಗಾದ ವಿದ್ಯಾರ್ಥಿನಿಯ ದೂರನ್ನು ಸ್ವೀಕರಿಸಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.