ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿ ಸದಸ್ಯ ಪ್ರೇಮಾನಂದ ಶೆಟ್ಟಿ ಹಾಗೂ ಬಿಜೆಪಿ ಸದಸ್ಯೆ ಸುಮಂಗಲಾ ರಾವ್ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
22ನೇ ಅವಧಿಯ ಮೇಯರ್/ಉಪ ಮೇಯರ್ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆ ನಡೆದಿದ್ದು, ಚುನಾವಣಾ ಅಧಿಕಾರಿ ಪ್ರಕಾಶ್, ಅಪರ ಜಿಲ್ಲಾಧಿಕಾರಿ ಎಂ ಜೆ ರೂಪಾ ಮತ್ತು ಎಂಸಿಸಿ ಉಪ ಆಯುಕ್ತ ಸಂತೋಷ್ ಅವರು ಚುನಾವಣೆ ನಡೆಸಿದರು.
ಪ್ರೇಮಾನಂದ ಶೆಟ್ಟಿ ಹಾಗೂ ಸುಮಂಗಲಾ ರಾವ್ ಅವರು ಇಬ್ಬರು ಶಾಸಕರ ಮತ ಸೇರಿ ತಲಾ 46 ಮತಗಳು ಪಡೆದರೆ. ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ ಅವರು 14 ಮತ ಪಡೆದರು. ಚುನಾವಣೆಯಲ್ಲಿ ಎಸ್‌ಡಿಪಿಐನ ಇಬ್ಬರು ಸದಸ್ಯರು ತಟಸ್ಥರಾಗಿದ್ದರು. ಮೇಯರ್ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪ ಮೇಯರ್ ಸ್ಥಾನವು ಸಾಮಾನ್ಯ ಮಹಿಳೆಗೆ ನಿಗದಿಯಾಗಿತ್ತು.
ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಸ್ಪರ್ಧಿಸಲು ಹಿರಿಯ ಸದಸ್ಯರಾದ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್ ಸ್ಥಾನಕ್ಕೆ ಕುಂಜತ್‌ಬೈಲ್ ಸೌತ್ ವಾರ್ಡ್‌ನ ಬಿಜೆಪಿ ಸದಸ್ಯೆ ಸುಮಂಗಲಾ ರಾವ್ ಅವರನ್ನು ಬಿಜೆಪಿ ಮುಖಂಡರು ಅಯ್ಕೆ ಮಾಡಿದ್ದರು. ಮಂಗಳೂರು ಪಾಲಿಕೆ ಚುನಾವಣೆ 2019ರ ನ.12ರಂದು ನಡೆದು, ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಎಸ್‌ಡಿಪಿಐ 2 ಸ್ಥಾನ ಪಡೆದಿತ್ತು. ಇನ್ನು ಉಪ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಜೆಸಿಂತಾ ವಿಜಯ ಆಲ್ಫ್ರೆಡ್ ಅವರಿಗೆ 14 ಮತಗಳು ಲಭಿಸಿವೆ.
ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಮತ್ತು ಉಪಮೇಯರ್ ಚುನಾವಣೆ ಬಳಿಕ ಕಾರ್ಯಕರ್ತರು ಸಂಭ್ರಮಾಚರಣೆ ಸಂಭ್ರಮಾಚರಣೆ ಆಚರಿಸಿದ್ದಾರೆ.
Click this button or press Ctrl+G to toggle between Kannada and English