ಮಡೆಸ್ನಾನ ರಾಜ್ಯ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

11:30 AM, Wednesday, December 19th, 2012
Share
1 Star2 Stars3 Stars4 Stars5 Stars
(5 rating, 1 votes)
Loading...

Made Snanaಮಂಗಳೂರು :ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಡೆಸ್ನಾನ ಸೇವೆಗೆ ಸಂಬಧಿಸಿ ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೂಲಕ ಮಡೆಸ್ನಾನವನ್ನು ಬೆಂಬಲಿಸುತ್ತಿದ್ದ ವರ್ಗದ ಕಾನೂನು ಹೋರಾಟ ಒಂದು ಹಂತಕ್ಕೆ ಯಶಸ್ವಿಯಾಗಿದೆ.

ಈ ಹಿಂದೆ ಕೆಲ ಪ್ರಗತಿಪರ ಹೋರಾಟಗಾರರು ಹಾಗೂ ಬುದ್ಧಿಜಿವಿಗಳು ಈ ಪದ್ಧತಿಯನ್ನು ವಿರೋಧಿಸಿದ್ದರು ಮತ್ತು ನಿಷೇಧಿಸುವಂತೆ ಕೇಳಿಕೊಂಡಿದ್ದರು ಅಲ್ಲದೆ ಇತ್ತೀಚೆಗಷ್ಟೇ ಮಡೆಸ್ನಾನವನ್ನು ತಾತ್ಕಾಲಿಕವಾಗಿ ನಿಷೇಧಿಸುವಂತೆ ಹೈಕೋರ್ಟ್ ನಿಂದ ಆದೇಶ ತರುವಲ್ಲಿ ಯಶಸ್ವಿಯಾಗಿದ್ದರು. ಆದರೆ ರಾಜ್ಯ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಕರ್ನಾಟಕ ಆದಿವಾಸಿ ಬುಡಕಟ್ಟು ಹಿತರಕ್ಷಣಾ ವೇದಿಕೆ ಸುಪ್ರೀ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿ, ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ತರುವಂತೆ ಕೇಳಿಕೊಂಡಿತ್ತು. ಇವರ ಈ ಹೋರಾಟಕ್ಕೆ ಇದೀಗ ಯಶಸ್ಸು ಸಿಕ್ಕಿದಂತಾಗಿದೆ.

ಈ ಮೂಲಕ ಶ್ರೀ ಕ್ಷೇತ್ರದಲ್ಲಿ ಪುನಃ ಮಡೆಸ್ನಾನ ಹಿಂದಿನಂತೆ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English