ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿಗೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು

2:24 PM, Thursday, March 4th, 2021
Share
1 Star2 Stars3 Stars4 Stars5 Stars
(8 rating, 2 votes)
Loading...

Chicken Farmಪುತ್ತೂರು: ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿಯ ಪೈಪ್ ಸರಿಪಡಿಸಲು ಇಳಿದ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಪಾಣಾಜೆ ಗ್ರಾಮದ‌ ಕೋಟೆ ರಸ್ತೆಯ ಕೆಮಾಜೆ ಎಂಬಲ್ಲಿ ನಡೆದಿದೆ.

ಜೆಸಿಬಿಯಲ್ಲಿ ಮಣ್ಣು ಅಗೆಯುವ ಸಂದರ್ಭ ಭೂ ಕುಸಿತದಿಂದ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಕಾರ್ಮಿಕರನ್ನು ಪಾಣಾಜೆ ಗ್ರಾಮದ ಪಾರ್ಪಳದವರು ಎಂದು ತಿಳಿದುಬಂದಿದೆ.

ಕಡಮ್ಮಾಜೆ ಹಾಜಿ ಅಬ್ದುಲ್ಲಾ ಎಂಬುವವರಿಗೆ ಸೇರಿದ ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿಯ ಪೈಪ್ ಸರಿಪಡಿಸಲು ಇಳಿದಿರುವ ವೇಳೆ ಪೈಪ್ ಮುರಿದು ಬಿದ್ದು ಇಬ್ಬರು ಕಾರ್ಮಿಕರು ಹೊಂಡಕ್ಕೆ ಬಿದ್ದಿದ್ದಾರೆ. ಇದೇ ವೇಳೆ ಪಕ್ಕದಲ್ಲಿಯೇ ಜೆಸಿಬಿ ಮಣ್ಣು ಅಗೆಯುತ್ತಿದ್ದುದರಿಂದ ಮಣ್ಣು ಜರಿದು ಹೊಂಡದೊಳಗೆ ಬಿದ್ದಿದೆ. ಇದರಿಂದ‌ ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಣ್ಣಿನಡಿಯಲ್ಲಿ ಹೂತು ಹೋಗಿದ್ದ ಕಾರ್ಮಿಕರ ಮೃತದೇಹಗಳನ್ನು ಪುತ್ತೂರು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಂಪ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಹೊರ ತೆಗೆದಿದ್ದು, ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English