ಮಂಗಳೂರು : ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ನ ಉಳ್ಳಾಲ ಗ್ರಾಮಾಂತರ ಪ್ರಖಂಡದ ಸಂಚಾಲಕ ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಮಂಜನಾಡಿ ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕಳವು ಮಾಡಿದ್ದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು. ಈ ಹಿನ್ನೆಲೆ ಸಾರ್ವಜನಿಕರು ಆತನನ್ನು ಹಿಡಿದು ಹತ್ತಿರದ ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
Click this button or press Ctrl+G to toggle between Kannada and English