ರಂಗ-ಭಾಸ್ಕರ 2021 ಪ್ರಶಸ್ತಿಗೆ ಹಿರಿಯ ರಂಗಕರ್ಮಿ ಐ.ಕೆ.ಬೊಳುವಾರು ಆಯ್ಕೆ

11:56 PM, Tuesday, March 9th, 2021
Share
1 Star2 Stars3 Stars4 Stars5 Stars
(No Ratings Yet)
Loading...

IK Boluvaruಮಂಗಳೂರು :  ಕಳೆದ 42 ವರ್ಷಗಳಿಂದ ರಂಗಭೂಮಿಗೆ ಸಂಬಂಧಿಸಿದಂತೆ ನಟನೆ, ನಿರ್ದೇಶನ, ನಾಟಕ ರಚನೆ, ನೇಪಥ್ಯ, ಪ್ರಕಟಣೆ, ತರಬೇತಿ, ಸಂಘಟನೆ ಮುಂತಾದ ವಿವಿಧ ವಿಭಾಗಗಳಲ್ಲಿ ನಿರಂತರವಾಗಿ ಕಾರ್ಯ ನಿರ್ವಹಣೆ ಮಾಡಿ, ಮಕ್ಕಳ ರಂಗಭೂಮಿಯಲ್ಲೂ ಗಮನಾರ್ಹ ಕೆಲಸ ಮಾಡಿದ ಹಿರಿಯ ರಂಗಕರ್ಮಿ ಶ್ರೀ ಐ.ಕೆ.ಬೊಳುವಾರು ರವರಿಗೆ, ಪ್ರತಿಭಾವಂತ ರಂಗ ನಿರ್ದೇಶಕ ದಿವಂಗತ ಭಾಸ್ಕರ ನೆಲ್ಲಿತೀರ್ಥರವರ ನೆನಪಿನಲ್ಲಿ ಕೊಡಮಾಡುವ, 2021 ನೆ ಸಾಲಿನ, ರಂಗಭಾಸ್ಕರ-2021 ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ಗೋಪಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.

ಶ್ರೀ ಐ.ಕೆ.ಬೊಳುವಾರುರವರು ರಂಗಭೂಮಿಯಲ್ಲಿ ನಿರಂತರ ಕೆಲಸ ಮಾಡಿದ್ದು, ಗ್ರಹಣ, ಡೋಲು, ಮುದುಕ ಸೆಟ್ಟಿಯೂ, ಮೂವರು ಮಕ್ಕಳೂ, ಮಾಯಾ ಕುದುರೆ ಮುಂತಾದ ನಾಟಕಗಳನ್ನು ಬರೆದಿದ್ದು, ಚದುರಂಗ, ನಿರತ ನಿರಂತ ಮುಂತಾದ ಸಂಸ್ಥೆಗಳನ್ನು ಸ್ಥಾಪಿಸಿ, ಆ ಮೂಲಕ ರಂಗ ಕ್ರಾಂತಿ ಮಾಡಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಇವರನ್ನರಸಿ ಬಂದಿವೆ.

ರಂಗಭಾಸ್ಕರ ಪ್ರಶಸ್ತಿಗೆ ಈ ಹಿಂದೆ ವೇಣುಮಿತ್ರ ಕಾಸರಗೋಡು, ವಿಟ್ಲ ಮಂಗೇಶ್ ಭಟ್, ಶ್ರೀಮತಿ ರೋಹಿಣಿ ಜಗರಾಮ್ ಕಾಸರಗೋಡು ಚಿನ್ನಾ ಮತ್ತು ಗಣೇಶ್ ಕೊಲೆಕಾಡಿ ಭಾಜನರಾಗಿದ್ದರು.

ಡಾ.ನಾ.ದಾಮೋದರ ಶೆಟ್ಟಿ, ಡಾ.ಮೀನಾಕ್ಷಿ ರಾಮಚಂದ್ರ ಮತ್ತು ಜಾದೂಗಾರ ಕುದ್ರೋಳಿ ಗಣೇಶ್ ಆಯ್ಕೆ ಸಮಿತಿಯಲ್ಲಿ ಇದ್ದು, ಆಯ್ಕೆಗೆ ಸಹಕರಿಸಿದ್ದಾರೆ.

ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಹನ್ನೆರಡನೆ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ತಾ.10-3-2021 ಬುಧವಾರ ಸಂಜೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ‘ಮಿನುಗೆಲೆ ಮಿನುಗೆಲೆ ನಕ್ಷತ್ರ’ ಎಂಬ ಮಕ್ಕಳ ನಾಟಕ ಮತ್ತು ‘ದಾಟ್ಸ ಆಲ್ ಯುವರ್ ಆನರ್’ ಎಂಬ ಕನ್ನಡ ನಾಟಕ ಪ್ರದರ್ಶನ ಕೂಡ ಇದೆ. ಪ್ರವೇಶ ಉಚಿತ ಎಂದು ಗೋಪಾಲಕೃಷ್ಣ ಶೆಟ್ಟಿಯವರು ತಿಳಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English