ರಸ್ತೆ ಪಕ್ಕದಲ್ಲಿ ಬಸ್ಸಿಗೆ ಕಾಯುತ್ತಿದ್ದವರಿಗೆ ಡಿಕ್ಕಿ ಹೊಡೆದ ಪಿಕಪ್ ವಾಹನ, ಓರ್ವ ಮೃತ್ಯು

2:49 PM, Thursday, March 11th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Marshidಸುಳ್ಯ : ರಸ್ತೆ ಪಕ್ಕದಲ್ಲಿ ಬಸ್ಸಿಗೆ ಕಾಯುತ್ತಿದ್ದ ನಾಲ್ವರಿಗೆ ಢಿಕ್ಕಿಯಾದ ಪಿಕಪ್ ವಾಹನ ಓರ್ವ ಯುವಕ ನನ್ನು ಬಲಿಪಡೆದು ಇತರ ಮೂವರನ್ನು ಗಂಭೀರ ಗೊಳಿಸಿದ ಘಟನೆ ಪೆರಾಜೆ ಎಂಬಲ್ಲಿ ಬುಧವಾರ ರಾತ್ರಿ ಸುಮಾರು 10.30ಕ್ಕೆ ನಡೆದಿದೆ.

ಪಿಕಪ್ ವಾಹನವೊಂದು ವೇಗ ನಿಯಂತ್ರಣಕ್ಕೆಂದು ಹಾಕಲಾಗಿದ್ದ ಬ್ಯಾರಿಕೇಡ್ ಗೆ ಢಿಕ್ಕಿಯಾಗಿ ಬಳಿಕ ನಾಲ್ವರಿಗೆ ಡಿಕ್ಕಿ ಹೊಡೆದಿದೆ.

ಮೃತ ಯುವಕನನ್ನು ದುಗ್ಗಲಡ್ಕ ನಿವಾಸಿ ಮುರ್ಷಿದ್ ಎಂದು ಗುರುತಿಸಲಾಗಿದೆ.

ಮುರ್ಷಿದ್, ರಫೀಕ್, ಸತೀಶ್ ಹಾಗೂ ಉಮ್ಮರ್ ಎಂಬವರು ಪೆರಾಜೆ ಕಲ್ಲುಚರ್ಪೆ ಬಳಿ ಬಸ್ ಗಾಗಿ ಕಾಯುತ್ತಿದ್ದ ಸಂದರ್ಭ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್ ಗೆ ಬಡಿದು ಈ ನಾಲ್ವರ ಮೇಲೆ ಹರಿದಿದೆ. ಗಂಭೀರ ಗಾಯಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯವ ಹಾದಿ ಮಧ್ಯೆ ಮುರ್ಷಿದ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English