ರಮೇಶ್ ಜಾರಕಿಹೊಳಿ ಸಿಡಿ ಯುವತಿ ವಿಚಾರಣೆಗೆ ಹಾಜರಾಗಬೇಕು ಎಂದು ನಾನಾ ಕಸರತ್ತು ನಡೆಸುತ್ತಿರುವ ಕಬ್ಬನ್‍ಪಾರ್ಕ್ ಠಾಣೆ ಪೊಲೀಸರು

5:26 PM, Sunday, March 14th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Nidagundiಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ವಿಚಾರಣೆಗೆ ಹಾಜರಾಗಬೇಕು ಎಂದು ಕಬ್ಬನ್‍ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಯುವತಿ ಈ ಕೂಡಲೇ ಅಜ್ಞಾತವಾಸದಿಂದ ಹೊರಬಂದು ವಿಚಾರಣೆಗೆ ಹಾಜರಾಗಬೇಕು ಎಂದು ಕಬ್ಬನ್‍ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ ಹೊರಬಂದು 12 ದಿನ ಕಳೆದರೂ ಯುವತಿ ಅಜ್ಞಾತವಾಸದಲ್ಲಿರುವುದರಿಂದ ಆಕೆಯ ವಾಟ್ಸಪ್, ಇ-ಮೇಲ್ ಐಡಿಗೆ ನೋಟಿಸ್ ರವಾನಿಸಲಾಗಿದೆ. ಇದರ ಜತೆಗೆ ಆಕೆ ವಾಸ ಮಾಡುತ್ತಿದ್ದ ಮನೆ ಮಾಲೀಕರಿಗೆ, ಸ್ನೇಹಿತರಿಗೆ ಹಾಗೂ ವಿಜಯಪುರ ಜಿಲ್ಲೆಯಲ್ಲಿರುವ ಯುವತಿ ನಿವಾಸದ ಅಕ್ಕಪಕ್ಕದವರಿಗೂ ಪೊಲೀಸರು ಮಾಹಿತಿ ರವಾನಿಸಿದ್ದಾರೆ.

ನೋಟಿಸ್‍ನಲ್ಲಿ ಕಬ್ಬನ್‍ಪಾರ್ಕ್ ಪೊಲೀಸ್ ಇನ್ಸ್‍ಪೆಕ್ಟರ್ ಅವರ ಮೊಬೈಲ್ ನಂಬರ್ ಅನ್ನು ನಮೂದಿಸಲಾಗಿದ್ದು, ಯಾವಾಗ, ಯಾವ ಸಮಯಕ್ಕೆ ವಿಚಾರಣೆಗೆ ಹಾಜರಾಗುತ್ತೇನೆ ಎಂಬುದರ ಬಗ್ಗೆ ಮಾಹಿತಿ ರವಾನಿಸಿದರೆ ಆಕೆಯ ಭದ್ರತೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವುದಾಗಿಯೂ ಭರವಸೆ ನೀಡಲಾಗಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಹಿಂಪಡೆದಿದ್ದರೂ ಅವರ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿರುವುದು ನಾನಾ ರೀತಿಯ ಅನುಮಾನಗಳಿಗೆ ಕಾರಣವಾಗಿದೆ. ಸಿಡಿಯಲ್ಲಿ ರಮೇಶ್ ಜಾರಕಿಹೊಳಿ ಜತೆ ಇದ್ದ ನಿಡಗುಂದಿಯ ಯುವತಿಯ ಮನೆ ಮುಂದೆ ನಗರದ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು ನೋಟಿಸ್ ಅಂಟಿಸಿದ್ದಾರೆ.

ಇದು ಅನುಮಾನಕ್ಕೆ ಕಾರಣವಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ದಿನೇಶ್ ಕಲ್ಲಹಳ್ಳಿ ಮತ್ತೆ ದೂರು ಹಿಂಪಡೆದಿದ್ದರು. ಇದಕ್ಕೆ ಪೊಲೀಸರು ಸಹ ಅನುಮತಿ ನೀಡಿದ್ದರು. ಇದೀಗ ಏಕಾಏಕಿ ಯುವತಿ ಮನೆಗೆ ನೋಟಿಸ್ ಅಂಟಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English