ಮಂಗಳೂರು : 2021ರ ಕೇಂದ್ರ ಬಜೆಟ್‌ನಲ್ಲಿ ಸಾರ್ವಜನಿಕ ರಂಗದ 2 ಬ್ಯಾಂಕ್ ಮತ್ತು ಒಂದು ವಿಮಾ ಕಂಪೆನಿಯನ್ನು ಖಾಸಗೀಕರಣಗೊಳಿಸಲು ಘೋಷಿಸಿರುವುದನ್ನು ಖಂಡಿಸಿ ಸಂಯುಕ್ತ ಬ್ಯಾಂಕ್ ಒಕ್ಕೂಟಗಳ ವೇದಿಕೆ ನೀಡಿರುವ ಕರೆಯಂತೆ ದ.ಕ. ಜಿಲ್ಲೆಯಲ್ಲಿ ಬ್ಯಾಂಕ್ ನೌಕರರು ಸೋಮವಾರ ಬೆಳಗ್ಗೆಯಿಂದಲೇ ಮುಷ್ಕರ ಆರಂಭಿಸಿದ್ದಾರೆ.
ಮಂಗಳೂರು ನಗರದ ಸಹಿತ ಜಿಲ್ಲೆಯ ವಿವಿಧೆಡೆ ಸುಮಾರು 2 ಸಾವಿರಕ್ಕೂ ಅಧಿಕ ಬ್ಯಾಂಕ್ ನೌಕರರು ಇಂದಿನ ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಮಂಗಳವಾರವೂ ಮುಷ್ಕರ ನಡೆಸಲಿದ್ದಾರೆ.
ಸೋಮವಾರ ಕೆನರಾ ಬ್ಯಾಂಕ್‌ನ ನಗರದ ಬಲ್ಮಠ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಬ್ಯಾಂಕ್ ನೌಕರರು ಸರಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ಮಂಗಳೂರು ಮಿನಿ ವಿಧಾನ ಸೌಧದ ಮುಂದೆಯೂ ಧರಣಿ ನಡೆಸಿದರು. ಬ್ಯಾಂಕ್ ಮುಷ್ಕರದಿಂದ ಗ್ರಾಹಕರು ಸಮಸ್ಯೆಗಳನ್ನು ಎದುರಿಸುವಂತಾಗಿದೆ.
Click this button or press Ctrl+G to toggle between Kannada and English