ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಮೇಲೆ ತಲವಾರು, ಮರದ ಸೋಂಟೆಯಿಂದ ಮಾರಣಾಂತಿಕ ಹಲ್ಲೆ

5:32 PM, Monday, March 15th, 2021
Share
1 Star2 Stars3 Stars4 Stars5 Stars
(No Ratings Yet)
Loading...

Anil Poojary ಕಾರ್ಕಳ : ಹಿಂದೂ ಜಾಗರಣ ವೇದಿಕೆ ಮತ್ತು ಬಜರಂಗಳ ದಳ ಕಾರ್ಯಕರ್ತರ ತಂಡದ ನಡುವೆ ತಲವಾರು ದಾಳಿ ನಡೆದಿದ್ದು, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನನ್ನು ಮರಣಾತಿಕ ಹಲ್ಲೆ ನಡೆಸಿ  ಕೊಲೆಗೆ ಯತ್ನಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾ.14ರಂದು ರಾತ್ರಿ 10:30ರ ಸುಮಾರಿಗೆ ನಿಟ್ಟೆ ಪರಪ್ಪಾಡಿ ನಿವಾಸಿ ಅನಿಲ್ ಪೂಜಾರಿ(29) ಎಂಬವರ ಮೇಲೆ ಪರಪ್ಪಾಡಿ ಎಂಬಲ್ಲಿ ಆರೋಪಿಗಳಾದ ಬಜರಂಗದಳ ಕಾರ್ಯಕರ್ತರೆನ್ನಲಾದ ಸುನೀಲ್, ಸುಧೀರ್, ಪ್ರಸಾದ್, ಶರತ್, ಜಗದೀಶ್ ಪೂಜಾರಿ ಎಂಬವರು ಅನಿಲ್ ಮೇಲೆ ತಲವಾರು ದಾಳಿ ನಡೆಸಿದ್ದಾರೆಂದು  ಆರೋಪಿಸಲಾಗಿದೆ.

ರವಿವಾರ ರಾತ್ರಿ ಕಾರಿನಲ್ಲಿ ಬಂದ ಆರೋಪಿಗಳು ಮಾರಕಾಯುಧಗಳಾದ ತಲವಾರು ಹಾಗೂ ಮರದ ಸೋಂಟೆಯೊಂದಿಗೆ ಅನಿಲ್ ಪೂಜಾರಿಯವರ ಜಾಗಕ್ಕೆ ಅಕ್ರಮವಾಗಿ ಪ್ರವೇಶಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದರೆನ್ನಲಾಗಿದೆ. ಬಳಿಕ ಮನೆಯೊಳಗೆ ನುಗ್ಗಿದ ಆರೋಪಿಗಳು, ತಡೆಯಲು ಬಂದ ಅನಿಲ್ ತಾಯಿ ಸುಗುಣಾರನ್ನು ತಳ್ಳಿ ಹಾಕಿ ಕಾಲಿನಿಂದ ತುಳಿದಿದ್ದರೆಂದು ದೂರಲಾಗಿದೆ. ಈ ವೇಳೆ ಸುಧೀರ್ ಮತ್ತು ಸುನೀಲ್ ಕೊಲ್ಲುವ ಉದ್ದೇಶದಿಂದ ತಲವಾರಿನಿಂದ ಅನಿಲ್ ತಲೆಗೆ ದಾಳಿ ಮಾಡಿದ್ದರೆ, ಉಳಿದವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪರಪ್ಪಾಡಿ ಶಾಲೆಯ ಬಳಿಯ ಸರಕಾರಿ ರಸ್ತೆಯ ವಿಚಾರದಲ್ಲಿ ಇವರ ಮಧ್ಯೆ ತಕರಾರಿದ್ದು, ಇದೇ ಕಾರಣಕ್ಕೆ ಈ ಹಿಂದೆಯೂ ಇವರ ನಡುವೆ ಸಣ್ಣಪುಟ್ಟ ಜಗಳ ನಡೆದಿತ್ತೆನ್ನಲಾಗಿದೆ.

ಹಲ್ಲೆಯಿಂದ ಗಾಯಗೊಂಡಿರುವ ಅನಿಲ್ ಹಾಗೂ ಅವರ ತಾಯಿ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English