- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಎರಡನೇ ಅಲೆ ಪ್ರಾರಂಭದ ಸೂಚನೆ

Maharastra [1]ನವದೆಹಲಿ:  ಮಹಾಮಾರಿ ಕೊರೋನಾ ವೈರಸ್ ಎರಡನೇ ಅಲೆ ಮಹಾರಾಷ್ಟ್ರದಲ್ಲಿ ಮತ್ತೆ ಪ್ರಾರಂಭ ವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಸಿದೆ.

ದೇಶದಲ್ಲಿ ಇಂದು ಸತತ 6ನೇ ದಿನವೂ 20,000ಕ್ಕೂ ಹೆಚ್ಚು ಕರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಕಟ್ಟುನಿಟ್ಟಾದ ನಿಯಂತ್ರಣ ತಂತ್ರಗಳತ್ತ ಗಮನಹರಿಸುವಂತೆ ಕೇಂದ್ರ ಸರ್ಕಾರ ಅತಿ ಹೆಚ್ಚು ಕೊರೋನಾ ಪೀಡಿತ ಮಹಾರಾಷ್ಟ್ರಕ್ಕೆ ಸೂಚಿಸಿದೆ.

ದೇಶದಲ್ಲಿ ಮಂಗಳವಾರ 24,492 ಹೊಸ ಕೋವಿಡ್ -19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 1.14 ಕೋಟಿಗೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇನ್ನು ಒಂದೇ ದಿನ ಮಹಾಮಾರಿ ವೈರಸ್ 131 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,56,014ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಒಟ್ಟು 1,14,09,831 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 20,191 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,10,27,543 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,23,432 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.