- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಸೀದಿ ಹಾಗೂ ದರ್ಗಾಗಳ ಆಡಳಿತ ಸಮಿತಿಗಳಿಗೆ ಶಬ್ದ ಮಾಲಿನ್ಯ ನಿಯಂತ್ರಣ ಸಂಬಂಧ ಅರಿವು ಮೂಡಿಸಲು ತೀರ್ಮಾನ

Azan [1]ಮಂಗಳೂರು  :  ಈ ಹಿಂದೆ ಅಲಹಾಬಾದ್ ಹೈಕೋರ್ಟ್ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯ ಯಾವುದೇ ಧ್ವನಿವರ್ಧಕಗಳನ್ನು ಬಳಸದೆ ಅಜಾನ್ ಧಾರ್ಮಿಕ ಪ್ರಾರ್ಥನೆ ಕರೆಯನ್ನು ಮಸೀದಿಗಳ ಮಿನಾರ್‌ಗಳಿಂದ ಮಾನವ ಧ್ವನಿಯಿಂದ ಮಾತ್ರ ಪಠಿಸಬಹುದು ಎಂದು ಹೇಳಿತ್ತು.

ಅಜಾನ್ ಇಸ್ಲಾಂ ಧರ್ಮದ ಅತ್ಯಗತ್ಯ ಮತ್ತು ಅವಿಭಾಜ್ಯ ಅಂಗವಾಗಿರಬಹುದು ಆದರೆ ಧ್ವನಿವರ್ಧಕಗಳು ಅಥವಾ ಇತರ ಧ್ವನಿ ವರ್ಧಕ ಸಾಧನಗಳ ಮೂಲಕ ಅದರ ಪಠಣವು ಆರ್ಟಿಕಲ್ 25 ರ ಅಡಿಯಲ್ಲಿ ಪ್ರತಿಪಾದಿಸಲಾದ ಮೂಲಭೂತ ಹಕ್ಕನ್ನು ರಕ್ಷಿಸುವ ಧರ್ಮದ ಅವಿಭಾಜ್ಯ ಅಂಗವೆಂದು ಹೇಳಲಾಗುವುದಿಲ್ಲ. ಸಾರ್ವಜನಿಕ ಆದೇಶ, ನೈತಿಕತೆ ಅಥವಾ ಆರೋಗ್ಯ ಮತ್ತು ಸಂವಿಧಾನದ ಭಾಗ III ರಲ್ಲಿನ ಇತರ ನಿಬಂಧನೆಗಳಿಗೆ ಸಹ ಒಳಪಟ್ಟಿರುತ್ತದೆ . ಇದು ಎಲ್ಲ ಪ್ರದೇಶಗಳಲ್ಲೂ ಎಂದು ನ್ಯಾಯಪೀಠ ತೀರ್ಪುನೀಡಿದೆ.

ಒಬ್ಬ ನಾಗರಿಕನು ತಾನು ಇಷ್ಟಪಡದ ಅಥವಾ ಅವನಿಗೆ ಅಗತ್ಯವಿಲ್ಲದ ಯಾವುದನ್ನಾದರೂ ಕೇಳಲು ಒತ್ತಾಯಿಸಬೇಕು ಎಂದು ಹೇಳಲಾಗುವುದಿಲ್ಲ, ಏಕೆಂದರೆ ಅದು ಇತರ ವ್ಯಕ್ತಿಗಳ ಮೂಲಭೂತ ಹಕ್ಕನ್ನು ಕಸಿದುಕೊಳ್ಳುತ್ತದೆ” ಎಂದು ನ್ಯಾಯಪೀಠ ತಿಳಿಸಿತ್ತು.

ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠವು ಧಾರ್ಮಿಕ ಸ್ಥಳಗಳಲ್ಲಿ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ ಮಾಡುವುದರ ವಿರುದ್ಧ ಕ್ರಮ ಜರುಗಿಸಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಪೋಲಿಸ್ ಇಲಾಖೆಗೆ ನಿರ್ದೇಶನ ಕೂಡ ನೀಡಿತ್ತು.

ಈಗ  ಮಸೀದಿ, ದರ್ಗಾಗಳಲ್ಲಿ ಧ್ವನಿ ವರ್ಧಕ ಬಳಕೆಗೆ ನಿಷೇಧ ಹೇರಿಕೆಗೆ ಸಂಬಂಧಿಸಿದಂತೆ ರಾಜ್ಯ ವಕ್ಪ್ ಬೋರ್ಡ್ ಮಹತ್ವದ ಆದೇಶವನ್ನು ಹೊರಡಿಸಿದ್ದು, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕ ಬಳಕೆಗೆ ನಿಷೇಧ ಹೇರಿದೆ.

ಸುಮಾರು 32 ಸಾವಿರ ಮಸೀದಿಗಳು ಹಾಗೂ ದರ್ಗಾಗಳಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕಗಳನ್ನು ವಕ್ಪ್ ಬೋರ್ಡ್ ಸೂಚನೆಯನ್ನು ನೀಡಿದೆ. ಶಬ್ದ ಮಾಲಿನ್ಯ ನಿಯಂತ್ರಣ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಂಬಂಧ ಕಳೆದ ಡಿ.19ರಂದು ರಾಜ್ಯ ವಕ್ಫ್‌ ಬೋರ್ಡ್ ಸಭೆ ನಡೆಸಿತ್ತು. ಎಲ್ಲಾ ಮಸೀದಿ ಹಾಗೂ ದರ್ಗಾಗಳ ಆಡಳಿತ ಸಮಿತಿಗಳಿಗೆ ಶಬ್ದ ಮಾಲಿನ್ಯ ನಿಯಂತ್ರಣ ಸಂಬಂಧ ಅರಿವು ಮೂಡಿಸಲು ತೀರ್ಮಾನ ಕೈಗೊಳ್ಳಲಾಗಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯ ವಕ್ಫ್‌ ಬೋರ್ಡ್, ಮಸೀದಿ ಹಾಗೂ ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕಗಳನ್ನು ಬಳಕೆ ಮಾಡದಂತೆ ಸೂಚಿಸಿದೆ. ಆದರೆ, ಅಝಾನ್‌ಗೆ ಯಾವುದೇ ನಿರ್ಬಂಧ ಇಲ್ಲ ಎಂದು ತಿಳಿಸಿದೆ. ಅಲ್ಲದೇ ರಾಜ್ಯ ವಕ್ಫ್‌ ಬೋರ್ಡ್‌ ಸದಸ್ಯ ಮತ್ತು ಕರ್ನಾಟಕ ಮುಸ್ಲಿಂ ಜಮಾತ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನ ಶಾಫಿ ಸಾದಿ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ.