ಪತ್ರಕರ್ತರ ಕ್ಷೇಮಾಭಿವೃದ್ಧಿನಿಧಿಗೆ ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್ ಚಾಲನೆ

5:54 PM, Saturday, March 20th, 2021
Share
1 Star2 Stars3 Stars4 Stars5 Stars
(No Ratings Yet)
Loading...

Journalist welfare

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹ ಭಾಗಿತ್ವದಲ್ಲಿ ಆರಂಭಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೀಶ್ವರ್ ಚಾಲನೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕರಾದ ಕುಮಾರ್ ಪುಷ್ಕರ್ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು , ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ್ ಶೆಟ್ಟಿ , ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ರಾಜ್ಯದ ಪ್ರವಾಸೋದ್ಯಮ ಸಚಿವ ಚಾಲನೆ ನೀಡಿ 5 ಲಕ್ಷ ರೂ. ದೇಣಿಗೆ ಘೋಷಿಸಿದರು.

ಮಾಜಿ ಸಚಿವ ಕೃಷ್ಣ ಪಾಲೆಮಾರ್ ರವರು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 5 ಲಕ್ಷ ರೂ.ಗಳ ಕೊಡುಗೆಯನ್ನು ಘೋಷಿಸಿದರು.

ಮೇಯರ್ ಪ್ರೇಮಾನಂದ ಶೆಟ್ಟಿ ,ಮಾತನಾಡಿ, ಪತ್ರಕರ್ತರ ಬೇಡಿಕೆಗಳನ್ನು ಸರಕಾರದ ಸೂಚನೆ ನಿಯಮಗಳ ಮೇರೆಗೆ ಪಾಲಿಕೆ ವತಿಯಿಂದ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಮಾಹಿತಿ ಪತ್ರ ವನ್ನು ಈ ಸಂದರ್ಭದಲ್ಲಿ ಬಿಡುಗಡೆ ಗೊಳಿಸಲಾಯಿತು.

Journalist welfare

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English