ನೇತ್ರಾವತಿ ಸೇತುವೆಯಲ್ಲಿ ರಿಕ್ಷಾ ಮತ್ತು ಕಾರು ಅಫಘಾತ, ಚಾಲಕ ಸಾವು

11:50 AM, Saturday, March 27th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Netravathi Bridgeಉಳ್ಳಾಲ : ನೇತ್ರಾವತಿ ಸೇತುವೆಯಲ್ಲಿ ರಿಕ್ಷಾ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗ್ಗೆಸಂಭವಿಸಿದೆ.

ಮೃತರನ್ನು ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ ಪುತ್ರ ಶ್ಯಾಮಪ್ರಸಾದ್ (45)ಎಂದು ಗುರುತಿಸಲಾಗಿದೆ.

ಶ್ಯಾಮಪ್ರಸಾದ್ ಬೆಳಗ್ಗೆ ಮನೆ ಸಮೀಪದ ಬಾಡಿಗೆ ದೊರಕಿತೆಂದು ಮನೆಯಲ್ಲಿ ತಿಳಿಸಿ ಮಂಗಳೂರಿಗೆ ತೆರಳಿದ್ದರು. ಅಲ್ಲಿಂದ ವಾಪಸ್ಸಾಗುವ ಸಂದರ್ಭ ಕಾರು ಢಿಕ್ಕಿ ಹೊಡೆದಿದೆ. ಪಡೀಲ್ ಕಣ್ಣೂರಿನಿಂದ ತಲಪಾಡಿ ಶಾರದಾ ವಿದ್ಯಾ ಸಂಸ್ಥೆಗೆ ಸಹೋದರನನ್ನು ಬಿಡಲು ಬರುತ್ತಿದ್ದ ಕಾರು ಚಾಲಕ ರಿಕ್ಷಾಗೆ ಢಿಕ್ಕಿ ಹೊಡೆದಿದ್ದಾನೆ.

ರಿಕ್ಷಾದ ಹಿಂಬದಿಗೆ ಕಾರು ಢಿಕ್ಕಿ ಹೊಡೆಯುತ್ತಿದ್ದಂತೆ , ಸೇತುವೆಯ ಬದಿಯಲ್ಲಿ ಅಳವಡಿಸಿದ ತಂತಿಬೇಲಿಗೆ  ರಿಕ್ಷಾ ತಗಲಿ ಚಾಲಕ ಹೊರಗೆಸೆಯಲ್ಪಟ್ಟು, ಅವರ ಮೇಲೆ ಕಾರು ಚಲಿಸಿದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಸೈಗೋಳಿ ರಿಕ್ಷಾ ಪಾರ್ಕಿನಲ್ಲಿ ರಿಕ್ಷಾ ಚಲಾಯಿಸುತ್ತಿದ್ದ ಶ್ಯಾಮಪ್ರಸಾದ್ ಕುಟುಂಬದ ಆಧಾರಸ್ತಂಭವಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Netravathi Bridge

Netravathi Bridge

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English