ವಿಟ್ಲ : ಮೆಹೆಂದಿ ಕಾರ್ಯಕ್ರಮಕ್ಕೆ ವೊಂದಕ್ಕೆ ಬಂದ ಬಾಲಕನ ಮೇಲೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲದ ಮನೆಯೊಂದರಲ್ಲಿ ಮೆಹೆಂದಿ ಕಾರ್ಯಕ್ರಮವಿತ್ತು. ಇಲ್ಲಿಗೆ ಪುತ್ತೂರು ಮೂಲದ ಹನ್ನೊಂದು ವರ್ಷದ ಬಾಲಕ ಆಗಮಿಸಿದ್ದ. ಇಲ್ಲಿಗೆ ಕಬಕ ಮೂಲದ ಹಮೀದ್ ಯಾನೆ ಮೌಲ ಅಮ್ಮಿ ಎಂಬಾತ ಕೂಡಾ ಬಂದಿದ್ದ. ಈ ಸಂದರ್ಭ ಆರೋಪಿಯು ಬಾಲಕನನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನೀಡಿದ್ದಾರೆನ್ನಲಾಗಿದೆ.
ಈ ಬಗ್ಗೆ ಬಾಲಕ ಮನೆಯವರಿಗೆ ವಿಚಾರ ತಿಳಿಸಿದ್ದು, ಆತನ ಪೋಷಕರು ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣದ ದಾಖಲಿಸಿದ್ದಾರೆ.
Click this button or press Ctrl+G to toggle between Kannada and English