- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದಕ್ಷಿಣ ಕನ್ನಡ ಜಿಲ್ಲಾಡಳಿತದ ಆದೇಶಕ್ಕೆ ಜಿಲ್ಲಾ ಉಸ್ತುವಾರಿ ಮಂತ್ರಿ ಕೋಟ ಸ್ಪಷ್ಟನೆ

srinivasa poojary [1]ಮಂಗಳೂರು : ಕೋವಿಡ್ 19 ನ್ನು ಪರಿಣಾಮ ಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ದ. ಕ ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಆತಂಕ ವ್ಯಕ್ತ ಪಡಿಸಿದ್ದು, ಮರು ಸ್ಪಷ್ಟನೆ ನೀಡಲು ಜಿಲಾಧಿಕಾರಿಯವರಿಗೆ ಸೂಚನೆ ಕೊಟ್ಟಿರುವುದಾಗಿ ದ. ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ.

ಜಿಲ್ಲೆಯಲ್ಲಿ ಯಕ್ಷಗಾನ, ಕೋಲಾ, ನೇಮ, ಪೂಜೆ, ಜಾತ್ರೆ ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೋವಿಡ್ 19 ನಿಯಮಪಾಲನೆಯೊಂದಿಗೆ ನಡೆಸಬಹುದಾಗಿದೆ ಎಂದು ದ. ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ.

ಬಯಲು ಮೈದಾನ ಪ್ರದೇಶಗಳಲ್ಲಿ ಗರಿಷ್ಟ 500 ಕ್ಕಿಂತ  ಜಾಸ್ತಿ ಜನ ಸೇರುವಂತಿಲ್ಲ ಕಡ್ಡಾಯವಾಗಿ ಮಾಸ್ಕ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.

srinivasa poojary [2]