- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪಚ್ಚನಾಡಿ ತ್ಯಾಜ್ಯ ಘಟಕದಲ್ಲಿ ಬೆಂಕಿ, ಸುತ್ತಮುತ್ತಲಿನ ಪರಿಸರದಲ್ಲಿ ದಟ್ಟ ಹೊಗೆ

pachanady [1]ಮಂಗಳೂರು: ಪಚ್ಚನಾಡಿ ತ್ಯಾಜ್ಯ ಘಟಕದಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಆ ಪ್ರದೇಶದ ಸುತ್ತ ದಟ್ಟವಾದ ಹೊಗೆ ಕಂಡುಬಂತು. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.

ಐದಾರು ಅಗ್ನಿಶಾಮಕ ವಾಹನಗಳಲ್ಲಿ ಆಗಮಿಸಿದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಆದರೆ ಬೆಂಕಿಯ ಜ್ವಾಲೆ ಮತ್ತು ದಟ್ಟ ಹೊಗೆಯಿಂದ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.