- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಶೋ ರೂಮ್​ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿ ಆತ್ಮಹತ್ಯೆ

deeksha [1]ಕಡಬ : ಶೋ ರೂಮ್ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ನಡೆದಿದೆ.

ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬುವವರ ಪುತ್ರಿ ಪುಷ್ಪಲತಾ ಯಾನೆ ದೀಕ್ಷಾ (25) ಮೃತ ಯುವತಿ.

ಕಡಬದ ಶೋ ರೂಮ್ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ದೀಕ್ಷಾ, ತನ್ನ ಮನೆ ಸಮೀಪವೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.